ರಾಷ್ಟ್ರಿಯ

ಚಾರ್‌ಧಾಮ ಯಾತ್ರೆಗೆ ತೆರಳಿದ್ದ 39 ಮಂದಿ ಸಾವು

Chardham

ಸಂದರ್ಭದಲ್ಲಿ ಗಂಗೋತ್ರಿ ಮತ್ತು ಯಮುನೋತ್ರಿ ಧಾಮ್ ಬಾಗಿಲುಗಳನ್ನು ತೆರೆಯಲಾಗಿದೆ. ಆದರೆ ಚಾರ್‌ಧಾಮ ಯಾತ್ರೆಗೆ ತೆರಳಿದ ಯಾತ್ರಾರ್ಥಿಗಳ ಪೈಕಿ ಇಲ್ಲಿವರೆಗೆ ಸುಮಾರು 39 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಭಕ್ತಾದಿಗಳಿಗೆ ಮನವಿಯನ್ನು ಮಾಡಿದ್ದು, “ದೈಹಿಕವಾಗಿ ಸಮಸ್ಯೆಗಳನ್ನು ಎದುರಿಸುವವರು ಚಾರ್‌ಧಾಮ್‌ ಯಾತ್ರೆಗೆ ಬರಬೇಡಿ” ಎಂದು ತಿಳಿಸಿದೆ. ಅಲ್ಲಿನ ವಾತಾವರಣ ಕೊಂಚ ಭಿನ್ನವಾಗಿರುವ ಹಿನ್ನೆಲೆಯಲ್ಲಿ ಈ ಅವಘಡಗಳು ಸಂಭವಿಸಿವೆ.

ಈ ಸಾವಿಗೆ ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮೌಂಟೇನ್ ಸಿಕ್‌ನೆಸ್ ಕಾರಣವಾಗಿರಬಹುದು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಧಾಮ್ ಯಾತ್ರೆ ಆರಂಭವಾಗಿ ಎರಡು ವಾರ ಕಳೆಯುವಷ್ಟರಲ್ಲಿ 39 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂಬುದು ಆಶ್ಚರ್ಯಕರ ಸಂಗತಿ. ಇನ್ನು ಈ ವರ್ಷ ಚಾರ್ ಧಾಮ್ ಯಾತ್ರೆಗೆ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಅಷ್ಟೇ ಅಲ್ಲದೆ, 18 ಮಂದಿ ಚಾರಣದ ಸಮಯದಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button