ಚಾ.ಪೇಟೆ ಮೈದಾನದಲ್ಲಿ ಗಣೇಶೋತ್ಸವ ಶೀಘ್ರ ತೀರ್ಮಾನ

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಇನ್ನೆರೆಡು ಮೂರು ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂಬಂಧ ಮುಖ್ಯಮಂತ್ರಿಗಳ ಅನುಪಸ್ಥಿತಿಂiiಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜತೆ ಈ ವಿಚಾರದ ಬಗ್ಗೆ ಚರ್ಚಿಸಿದ ನಂತರ ಅವರ ಸೂಚನೆಯಂತೆ ಇಂದು ಕಂದಾಯ, ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ.
ಕೋರ್ಟ್ ಆದೇಶಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ. ಅಡ್ವಕೇಟ್ ಜನರಲ್ ಅವರ ಜತೆಯೂ ಮಾತನಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡು ಸೋಮವಾರ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದರು.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ೫ ಅರ್ಜಿಗಳು ಬಂದಿವೆ. ಇದರಲ್ಲಿ ೨ ಅರ್ಜಿಗಳು ಸ್ಥಳೀಯರು ಕೊಟ್ಟಿದ್ದಾರೆ. ಇನ್ನು ೨ ದಿನ ಅವಕಾಶವಿದೆ. ಹಾಗಾಗಿ, ಅರ್ಜಿ ಹಾಕುವವರು ಹಾಕಬಹುದು, ಕಂದಾಯ ಸಚಿವನಾಗಿ ನಂತರ ತೀರ್ಮಾನ ಪ್ರಕಟಿಸುತ್ತೇನೆ ಎಂದರು.ಮುಸ್ಲಿಂ ಸಂಘಟನೆಗಳು ಈ ಮೈದಾನಕೋಸ್ಕರ ಹೋರಾಟ ಮಾಡುತ್ತಿದ್ದಾರೆ.
ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಮಾಹಿತಿ ಇದೆ. ಎಲ್ಲವನ್ನೂ ನೋಡಿಕೊಂಡು ತೀರ್ಮಾನ ಮಾಡುವುದಾಗಿ ಹೇಳಿದರು.ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪೊಲೀಸರು ಬಂದೋಬಸ್ತ್ ಒದಗಿಸುವ ಬಗ್ಗೆ ಅವರ ಅಭಿಪ್ರಾಯವನ್ನೂ ತೆಗೆದುಕೊಳ್ಳಲಾಗಿದೆ.
ಗಣೇಶೋತ್ಸವ ಮಾಡುವುದಾದರೆ ಹೇಗೆ ಮಾಡಬೇಕು. ಮುಂಜಾಗ್ರತಾ ಕ್ರಮಗಳೇನು ಎಲ್ಲದರ ಬಗ್ಗೆಯೂ ಚರ್ಚೆಯಾಗಿದೆ ಎಂದರು.ಶಾಸಮ ಜಮೀರ್ ಅಹ್ಮದ್ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ, ೭೫ ವರ್ಷಗಳಿಂದಲೂ ರಾಷ್ಟ್ರಧ್ವಜ ಹಾರಿಸಿರಲಿಲ್ಲ.
ವಿರೋಧಿಸುತ್ತ ಬಂದಿದ್ದರು. ಚಾಣಕ್ಯ ತಂತ್ರ ಮಾಡಬೇಕಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.