Uncategorized
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭಾನುವಾರ ರಾತ್ರಿ ಲಘು ಭೂಕಂಪನದ ಅನುಭವವಾಗಿದೆ.
ಜಿಲ್ಲೆಯ ಪೆದ್ದತುಕಂಪನಹಳ್ಳಿ, ಕದಿರನಗಿರಿಪಳ್ಳಿ ಗ್ರಾಮದ ಸುತ್ತಲಿನ ಪ್ರದೇಶದಲ್ಲಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.ಜನರು ಭಯ ಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದು, ಯಾವುದೇ ಅನಾಹುತವಾಗಿಲ್ಲ.