
ಮುರುಘಾ ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಚಿತ್ರದುರ್ಗ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ನವೆಂಬರ್ 4ರಂದು 2ನೇ ಅಪರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ 694 ಪುಟಗಳ ಚಾರ್ಜ್ ಶೀಟ್ ನಲ್ಲಿ ಮುರುಘಾ ಶ್ರೀ ಎ-1 ಆರೋಪಿ ಎಂದು ಉಲ್ಲೇಖಿಸಲಾಗಿದೆ.
ಮುರುಘಾ ಶ್ರೀ, ಲೇಡಿ ವಾರ್ಡನ್ ಎ-2 ಆರೋಪಿಯಾಗಿದ್ದು, ಕಾರ್ಯದರ್ಶಿ, ಕಿರು ಸ್ವಾಮೀಜಿ ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಫೋಕ್ಸೊ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಸೆಕ್ಷನ್ ಗಳಡಿ ದೂರು ದಾಖಲಿಸಿದ್ದಾರೆ.
ಹಾಸ್ಟೇಲ್ ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಮತ್ತು ಬರುವ ಔಷಧ ತುಂಬಿದ ಸೇಬು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.
ಅಲ್ಲದೇ ಬಾಲಕಿಯರ ಮೇಲೆ ಬೆಡ್ ರೂಮ್, ಬಾತ್ ರೂಮ್ ಅನ್ನದೇ ಎಲ್ಲೆಂದರಲ್ಲಿ ದೌರ್ಜನ್ಯ ಎಸಗಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.