ಚೀನಾದಿಂದ ಆಮದು ಮೋಹ ಏಕೆ: ಮೋದಿ ಸರ್ಕಾರಕ್ಕೆ ಕೇಜ್ರಿವಾಲ್ ತರಾಟೆ

ಗಡಿಯಲ್ಲಿ ಚೀನಾದ ಆಕ್ರಮಣ ಹೆಚ್ಚುತ್ತಿದೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಾ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಚೀನಾಗೆ ಬುದ್ಧಿ ಕಲಿಸಲು ಚೀನಾ ವಸ್ತುಗಳನ್ನು ಬಹಿಷ್ಕರಿಸಲೇಬೇಕು.
ಆದರೆ ಚೀನಾ ನಿರ್ಮಿತ ವಸ್ತುಗಳ ಆಮದು ಮೇಲೆ ಕೇಂದ್ರ ಸರ್ಕಾರಕ್ಕೆ ಏಕೆ ಮೋಹ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಇತ್ತೀಚೆಗೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಚೀನಾದ ವಸ್ತುಗಳನ್ನು ಬಹಿಷ್ಕರಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಚಕಮಕಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಗಡಿಯಲ್ಲಿ ನಮ್ಮ ಸೈನಿಕರು ಚೀನಿಯರೊಂದಿಗೆ ಹೋರಾಡುತ್ತಿದ್ದಾರೆ ಮತ್ತು ಕೆಲವು ಸೈನಿಕರು ಕಳೆದ ವರ್ಷ ಗಾಲ್ವಾನ್‌ನಲ್ಲಿ ಪ್ರಾಣ ತ್ಯಾಗ ಮಾಡಿದ್ದರು.
ಚೀನಾವನ್ನು ಶಿಕ್ಷಿಸುವ ಬದಲು ಮೋದಿ ಸರ್ಕಾರವು ನೆರೆಯ ದೇಶದಿಂದ ಹೆಚ್ಚಿನ ಪ್ರಮಾಣದ ಆಮದುಗಳಿಗೆ ಅವಕಾಶ ನೀಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಚೀನಾದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ.
ಕಳೆದ ಹಣಕಾಸು ವರ್ಷದಲ್ಲಿ 2020-21ರಲ್ಲಿ ಚೀನಾದಿಂದ 65 ಬಿಲಿಯನ್ ಡಾಲರ್ ಆಮದು ಮಾಡಿಕೊಂಡಿದ್ದರೆ, 2021-22ರಲ್ಲಿ ಭಾರತ ಚೀನಾದಿಂದ 95 ಬಿಲಿಯನ್ ಡಾಲರ್ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.