ರಾಜಕೀಯ

ಚುನಾವಣೆಗೆ ಬಿಜೆಪಿ ರಣ ಕಹಳೆ

ರಾಜ್ಯವಿಧಾನಸಭಾ ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿಸಿದೆ. ಮಂಡ್ಯದಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಬಿಜೆಪಿ ಶಕ್ತಿಪ್ರದರ್ಶನ ನಡೆಸಿ ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪದ ಜತೆಗೆ ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಸದೃಢಗೊಳಿಸಿ ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವತ್ತ ಬಿಜೆಪಿ ನಾಯಕರು ಗಮನ ಕೇಂದ್ರೀಕರಿಸಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಿ, ಮುಂದಿನ ಚುನಾವಣೆಯಲ್ಲಿ ಈ ಭಾಗದಲ್ಲಿ ಕಮಲ ಅರಳಿಸುವ ಉಮೇದಿನೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ಇಂದು ಸಕ್ಕರೆನಾಡು ಮಂಡ್ಯದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ, ಹುರುಪು ತುಂಬಿದರು.

ಬಿಜೆಪಿಗೆ ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ನೆಲೆ ಇಲ್ಲ ಎಂಬುದನ್ನು ಹುಸಿಗೊಳಿಸಿ, ಈ ಭಾಗದಲ್ಲೂ ಪಕ್ಷದ ಅಧಿಪತ್ಯವನ್ನು ಸ್ಥಾಪಿಸಲು ಅಮಿತ್ ಶಾರವರು ರಣತಂತ್ರವನ್ನು ರೂಪಿಸಿದ್ದು, ಅದರ ಭಾಗವಾಗಿ ಮಂಡ್ಯ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಸಮಾವೇಶ ನಡೆಸುವ ಮೂಲಕ ಪಕ್ಷವನ್ನು ಬಲಪಡಿಸಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯನ್ನು ಸಾಧಿಸಲು ಇಂದು ಮಂಡ್ಯದಲ್ಲಿ ಬಿಜೆಪಿಯ ಸಮಾವೇಶ ನಡೆಸಿ ಪಕ್ಷದ ವಿರಾಟ್ ಶಕ್ತಿಯ ಅನಾವರಣದ ಪ್ರಯತ್ನ ನಡೆದಿದೆ.

ಕೆಲ ತಿಂಗಳುಗಳಷ್ಟೆ ಬಾಕಿ ಇರುವ ಬೆನ್ನಲ್ಲೆ ಚಾಣಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿರುವುದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದು, ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರ ಸರಣಿ ಸಭೆಗಳನ್ನು ನಡೆಸಿ ಅಮಿತ್ ಶಾ ಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸುವ ಕಾರ್ಯ ನಡೆಸಿದ್ದಾರೆ.

ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಉತ್ಸಾಹ ಕಂಡು ಬಂದಿದ್ದು, ಸರಣಿ ಸಭೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಪಕ್ಷ ಸಂಘಟನೆ, ಸರ್ಕಾರದ ಕಾರ್ಯವೈಖರಿ ಕುರಿತು ಅಮಿತ್ ಶಾ ಮಾಹಿತಿ ಸಂಗ್ರಹಿಸಿದ್ದಾರೆ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಹಾಗೂ ಇತರ ಭಾಗಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದೆ.

ಈ ಸ್ಥಾನಗಳು ಕಾಂಗ್ರೆಸ್ ಪಾಲಾಗದಂತೆ ನೋಡಿಕೊಳ್ಳಲು ಬಿಜೆಪಿ ಕಸರತ್ತು ನಡೆಸಿದೆ.ಹಳೆ ಮೈಸೂರು ಭಾಗದಲ್ಲಿ ಅಭಿವೃದ್ಧಿಯ ಜತೆಗ ಹಿಂದುತ್ವದ ಮಂತ್ರವನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಬೆಂಗಳೂರು-ಮೈಸೂರು ಹೆದ್ದಾರಿ ಯೋಜನೆ, ಹಾಲು ಉತ್ಪಾದಕರಿಗೆ ಸಹಾಯಧನ, ಮೈಸೂರು, ಹಾಸನ ವಿಮಾನನಿಲ್ದಾಣ ಮತ್ತು ಈ ಭಾಗದ ರೈಲ್ವೆ ಯೋಜನೆಗಳನ್ನು ಮುಖ್ಯವಾಗಿ ಪ್ರಸ್ತಾಪಿಸಲು ನಿರ್ಧರಿಸಲಾಗಿದ್ದು, ಟಿಪ್ಪುಸುಲ್ತಾನ್, ಶ್ರೀರಂಗಪಟ್ಟಣ ಮಸೀದಿ, ರಾಮದೇವರ ಬೆಟ್ಟ ಅಭಿವೃದ್ಧಿ ಯೋಜನೆಗಳನ್ನು ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಯಡಿಯೂರಪ್ಪ ವಿದೇಶ ಪ್ರವಾಸಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶ ಪ್ರವಾಸ ಕೈಗೊಂಡಿದ್ದು, ಅವರು ಅಮಿತ್ ಶಾರವರ ಸಭೆ-ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿಲ್ಲ.

ಈ ಬಗ್ಗೆ ಯಡಿಯೂರಪ್ಪರವರು ಮೊದಲೇ ಅಮಿತ್ ಶಾ ರವರಿಗೆ ಮಾಹಿತಿ ನೀಡಿದ್ದು, ಯಡಿಯೂರಪ್ಪ ಬದಲು ಅವರ ಪುತ್ರ ಬಿ.ವೈ. ವಿಜಯೆಂದ್ರ ಅಮಿತ್ ಶಾರವರ ಸಭೆ-ಸಮಾವೇಶದಲ್ಲಿ ಭಾಗಿಯಾಗುವರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button