
ಬೆಂಗಳೂರು : ಹಾವೇರಿಯಲ್ಲಿ ಜನೇವರಿ 6, 7 ಮತ್ತು 8 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಪೂರ್ವಭಾವಿ ಸಭೆ ನಂತರ ಮಾತನಾಡಿದ ಸಚಿವ ಸುನೀಲ್ ಕುಮಾರ್, ಸಿಎಂ ಅವರ ಜೊತೆ ಚರ್ಚೆ ನಡೆಸಿ ದಿನಾಂಕ ಅಂತಿಮಗೊಳಿಸಿದ್ದೇವೆ. ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನರ ನಿರೀಕ್ಷೆ ಇದೆ.
30 ಸಾವಿರ ಜನರಿಗೆ ವಸತಿ ವ್ಯವಸ್ಥೆ, ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತಿದೆ. ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ.
ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಶಾಸಕರಾದ ನೆಹರು ಓಲೇಕಾರ್, ಅರುಣ್ ಕುಮಾರ್, ಹಾವೇರಿ ಡಿಸಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.