ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ (Narendra Modi) ಮೈಸೂರಿಗೆ ಆಗಮಿಸುತ್ತಿದ್ದಾರೆ.

ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.
ಮೈಸೂರು: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ (Narendra Modi) ಮೈಸೂರಿಗೆ ಆಗಮಿಸುತ್ತಿದ್ದಾರೆ.
ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ಗೆ ಪತ್ರ ಬರೆದಿದೆ. ಪಿ.ರವಿಕುಮಾರ್ಗೆ ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಪಿಎಂಒ ತಿಳಿಸಿದೆ. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.
ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ.ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಮೋದಿ ಮೈಸೂರಿಗೆ ಬರುವ ಬಗ್ಗೆ ಗೊಂದಲ ಇತ್ತು. ಆದರೆ ಪ್ರಧಾನಿ ಕಾರ್ಯಾಲಯ ಇದೀಗ ಮೋದಿ ಬರುವ ಬಗ್ಗೆ ಸ್ಪಷ್ಟತೆ ನೀಡಿದೆ.