ರಾಜ್ಯ

ಜೂ.21ರಂದು ಶಾಲೆಗಳಲ್ಲಿ ಯೋಗ ದಿನಾಚರಣೆ ಆಚರಿಸುವಂತೆ ಆದೇಶ

Updated news

ಜೂನ್ 21ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸ್ಥಳೀಯ ಚುನಾಯಿತ ಪ್ರತಿನಿಗಳು, ಅಕಾರಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಹಾಗೂ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ರಾಜ್ಯದ ಎಲ್ಲ ಶಾಲೆಗಳಲ್ಲಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸೂಚಿಸಲಾಗಿದೆ.

ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ರಾಜ್ಯದ ಎಲ್ಲ ಶಾಲೆಗಳಲ್ಲಿ ಅಂದು(ಜೂ.21) ಅರ್ಧ ದಿನ ಶಾಲೆಯನ್ನು ನಡೆಸಲು ಸೂಚಿಸಲಾಗಿದೆ.

ಆ ದಿನದ ಮೊದಲ ಒಂದೂವರೆ ಗಂಟೆಯ ಅವಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾದ ಯೋಗಾಸನಗಳ ಅಭ್ಯಾಸ ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದೆ.

ಆ ದಿನದ ಅರ್ಧ ದಿನದ ಪಾಠಗಳನ್ನು ಸರಿದೂಗಿಸಲು ಜೂನ್ 25 ಶನಿವಾರದಂದು ಪೂರ್ಣ ದಿನದ ಶಾಲೆಯನ್ನು ನಡೆಸುವಂತೆ ಆದೇಶಿಸಲಾಗಿದೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button