ರಾಜ್ಯ
ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(81) ವಿಧಿವಶರಾಗಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ಹೆಲ್ತ್ ಬುಲೆಟಿನ್‌ನಲ್ಲಿ ವೈದ್ಯರು ತಿಳಿಸಿದ್ದರು.