
ಡಾ. ರಾಜ್‌ಕುಮಾರ್ ಕುಟುಂಬದ ಬಗ್ಗೆ ಅವಹೇಳನ ಮಾಡಿದರೆಂಬ ಕಾರಣಕ್ಕೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆದಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ಘಟನೆಯಾಗಿದ್ದು, ಹಲ್ಲೆಯನ್ನು ಖಂಡಿಸಿರುವ ಸಂಘಟನೆ ಸದಸ್ಯರು, ಡಾ. ರಾಜ್ ಕುಟುಂಬದ ಹೆಸರಿನಲ್ಲಿ ಪುನೀತ್ ಕೆರೆಹಳ್ಳಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ರಾಜ್‌ಕುಮಾರ್ ಕುಟುಂಬದ ಬಗ್ಗೆ ಪುನೀತ್ ಕೆರೆಹಳ್ಳಿ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಆರೋಪವಿದೆ.
ಇದನ್ನು ಖಂಡಿಸಿ ಕನ್ನಡ ಸಂಘಟನೆಯ ಪದಾಧಿಕಾರಿಗಳು ಅವರ ಮೇಲೆ ಚಾಂರಾಜಪೇಟೆಯಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.