
ಡಿಸೆಂಬರ್ 29ರಂದು ಬೆಂಗಳೂರಲ್ಲಿ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಅಂದು ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.
ಅಂದು ಆಟೊ ಚಾಲಕರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ನಿಂದ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ. ಬೆಂಗಳೂರಿನ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.
ದಿನದಿಂದ ದಿನಕ್ಕೆ ರಾಜಧಾನಿಯಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ರೂ ಸಂಚರಿಸುತ್ತಿವೆ. ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್ಗಳಿಗೆ ಅನುಮತಿ ನೀಡಿದೆ.
ಮೊದಲ ಹಂತದಲ್ಲಿ 100 ಇ- ಬೈಕ್ ರಸ್ತೆಗಿಳಿಸಲು ನಿರ್ಧರಿಸಿರುವ ಬೌನ್ಸ್ ಕಂಪನಿ, ಹಂತ ಹಂತವಾಗಿ 1000 ಇ- ಬೈಕ್ಗಳನ್ನ ರಸ್ತೆಗಿಳಿಸಲು ಮುಂದಾಗಿದೆ ಎಂಬುದು ಆಟೋ ಚಾಲಕ ಅಳಲು.