ರಾಜ್ಯ

ಡೋಲಿ ಮೂಲಕ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ ಜನ : ಇದು ಸರ್ಕಾರ ತಲೆತಗ್ಗಿಸುವ ಘಟನೆ.

NCIB: ಚಾಮರಾಜನಗರ, ಜು. 1: ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ ಡೋಲಿ ಕಟ್ಟಿ 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.ದೊಡ್ಡಾಣೆ ಗ್ರಾಮದ ಶಾಂತಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಲಭಿಸದೇ 8 ಕಿಮೀ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸಿದ್ದು ಸದ್ಯ ಶಾಂತಲಾ ಅವರ ಚೊಚ್ಚಲ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದು ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

Related Articles

Leave a Reply

Your email address will not be published. Required fields are marked *

Back to top button