ಡ್ರಗ್ಸ್ ಪಾರ್ಟಿ, ಬೆಂಗಳೂರಲ್ಲಿ ಬಾಲಿವುಡ್ ನಟ ಸಿದ್ದಾಂತ್ ಸೇರಿ ಐವರು ವಶಕ್ಕೆ
Actor Siddhanth Kapoor detained for drug consumption in Bengaluru

ನಗರದ ಪ್ರತಿಷ್ಠಿತ ಪಂಚತಾರ ಹೋಟೆಲ್‍ವೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಹಲಸೂರು ಠಾಣೆ ಪೊಲೀಸರು ದಾಳಿ ಮಾಡಿ ಬಾಲಿವುಡ್ ನಟ ಸೇರಿದಂತೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.ನಗರದ ಜಿ.ಟಿ ಮಾಲ್ ಮುಂಭಗದಲ್ಲಿರುವ ದಿ ಪಾರ್ಕ್ ಎಂಬ ಪಂಚತಾರಾ ಹೋಟೆಲ್‍ನಲ್ಲಿ ತಡರಾತ್ರಿಯಾದರೂ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಅನುಮಾನಗೊಂಡು ಸುಮಾರು 25ಕ್ಕೂ ಹೆಚ್ಚು ಪೊಲೀಸರ ತಂಡ ದಾಳಿ ಮಾಡಿ, ಪಾರ್ಟಿಯಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟ ಸಿದ್ದಾಂತ್ ಕಪೂರ್ ಸೇರಿ 35 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದೆ.
ವೈದ್ಯಕೀಯ ಪರೀಕ್ಷೆಯಲ್ಲಿ ಸಿದ್ದಾಂತ್ ಕಪೂರ್ ಸೇರಿದಂತೆ ಐದು ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ ಗುಳೇದ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಪೊಲೀಸರ ವಶದಲ್ಲಿರುವ ಸಿದ್ದಾಂತ್ ಕಪೂರ್ ಬಾಲುವಿಡ್‍ನ ಹಿರಿಯ ನಟ ಶಕ್ತಿ ಕಪೂರ್ ಅವರ ಪುತ್ರ.
ಈ ಹೋಟೆಲ್‍ನಲ್ಲಿ ಡ್ರಗ್ಸ್ ಪಾಟಿ ಆಯೋಜನೆ ಮಾಡಲಾಗಿದೆ ಎಂಬ ಮಾಹಿತಿ ಪೆಪೊಲೀಸರಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ದಾಳಿ ಮಾಡಿ ಪಾರ್ಟಿಯಲ್ಲಿ ಬಾಗಿಯಾಗಿದ್ದವರೆಲ್ಲರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ.
ಸದ್ಯಕ್ಕೆ ಐದು ಮಂದಿಯ ವರದಿ ಕೈ ಸೇರಿದ್ದು, ಅವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವುದಾಗಿ ಡಿಸಿಪಿ ತಿಳಿಸಿದ್ದಾರೆ. ಈ ಸಂಬಂಧ ಹಲಸೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.