ರಾಜ್ಯ
ಡ್ರಾಮಾ ಜೂನಿಯರ್ಸ್ ಸೀಸನ್ 4 ವಿನ್ನರ್ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್

ಕರ್ನಾಟಕದ ಅತಿ ದೊಡ್ಡ ಮಕ್ಕಳ ರಿಯಾಲಿಟಿ ಶೋ ಡ್ರಾಮಾ ಜೂನಿಯರ್ಸ್ ಸೀಸನ್ 4 ಗ್ರಾಂಡ್ ಫಿನಾಲೆ ಗೆ ಅದ್ಧೂರಿಯಾಗಿ ತೆರೆ ಬಿದ್ದಿದೆ .
ಜೀ ಕನ್ನಡ ವಾಹಿನಿ ಹೆಮ್ಮೆಯಿಂದ ಪ್ರಸ್ತುತ ಪಡಿಸಿದ್ದ ಈ ಶೋ ಸತತ 23 ವಾರಗಳ ಕಾಲ ಇಡೀ ಕರುನಾಡನ್ನು ರಂಜಿಸಿ ಇಂದು ಕರ್ನಾಟಕದ ಮನೆಮನೆಯ ಮುದ್ದಾದ ಕಾರ್ಯಕ್ರಮವಾಗಿದೆ. ಇನ್ನು ಈ ಸೀಸನ್ ನ ವಿಜೇತರಾಗಿ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್ ರವರು ಹೊರಹೊಮ್ಮಿದ್ದಾರೆ.
ತಮ್ಮ ಅದ್ಭುತ ಅಭಿನಯದ ಮೂಲಕ ಮನಸೂರೆಗೊಂಡಿದ್ದ 15 ಮಕ್ಕಳು ಫೈನಲ್ ಗೆ ಆಯ್ಕೆಯಾಗಿದಿದ್ದು ವಿಶೇಷವಾಗಿತ್ತು. ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು ತ್ರಿವಳಿ ರತ್ನಗಳು ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಿದ್ದಾರೆ.
ಅಷ್ಟೇ ಅಲ್ಲದೆ ಪ್ರತಿಯೊಬ್ಬ ಮಗುವಿಗೂ ಪದಕ ನೀಡುವ ಮೂಲಕ ಉಳಿದ 11 ಪ್ರತಿಭೆಗಳನ್ನು ಗೌರವಿಸಲಾಯಿತು.