ತನಿಖೆಯಿಂದ ಸತ್ಯಾಂಶ ಹೊರಬರಲಿ

ಚಿತ್ರದುರ್ಗದ ಮುರುಘಾಶ್ರೀಗಳ ಮೇಲಿನ ಆರೋಪಗಳ ಬಗ್ಗೆ ತನಿಖೆ ನಡೆದಿರುವ ಈ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖಾ ದೃಷ್ಟಿಯಿಂದ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳ ಮೇಲೆ ಫೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದ್ದು, ಇದೊಂದು ಪ್ರಮುಖ ಪ್ರಕರಣ. ಫೋಸ್ಕೊ ಪ್ರಕರಣವೂ ಆಗಿದೆ. ಹಾಗೆಯೇ, ಚಿತ್ರದುರ್ಗಾದಲ್ಲಿ ಅಪರ್ಣಾ ಪ್ರಕರಣವೂ ದಾಖಲಾಗಿದೆ ಎಂದರು.
ಪೊಲೀಸರು ಈ ಪ್ರಕರಣದಲ್ಲಿ ಸಂಪೂರ್ಣ ಸ್ವಾತಂತ್ರ್ಯದಿಂದ ತನಿಖೆ ನಡೆಸುತ್ತಿದ್ದಾರೆ. ತನಿಖೆ ನಂತರ ಸತ್ಯ ಹೊರ ಬರಲಿದೆ ಎಂದರು.ಈ ಸಂದರ್ಭದಲ್ಲಿ ಈ ಪ್ರಕರಣದ ಬಗ್ಗೆ ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖಾ ದೃಷ್ಟಿಯಿಂದ ಸರಿಯಲ್ಲ ಎಂದರು.
ರಾಜಿ ಸಂಧಾನಕ್ಕೆ ಸಭೆಕೋಟೆ ನಾಡು ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಶ್ರೀಗಳ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಿನ ಜಾವದವರೆಗೂ ರಾಜಿ ಸಂಧಾನ ಸಭೆ ನಡೆದಿದೆ.
ಈ ಮಧ್ಯೆ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣ ವರ್ಗಾವಣೆಯಾಗಿದ್ದು, ಇಂದು ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದ್ದು, ಈ ವರದಿ ಬಂದ ನಂತರ ಮುರುಘಾ ಮಠದ ಶ್ರೀಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಚಿತ್ರದುರ್ಗ ಬಳಿಯ ಗ್ರಾಮವೊಂದರಲ್ಲಿ ಸಂಧಾನ ಸಭೆ ನಡೆದಿದ್ದು, ಮುರುಘಾಶ್ರೀ, ಬಸವರಾಜನ್ ನೇರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಮಠದ ಆಡಳಿತಾಧಿಕಾರಿಯಾಗಿ ಬಸವರಾಜನ್ ಮುಂದುವರಿಕೆಗೆ ಚಿಂತನೆ ನಡೆದಿದೆ. ಈ ಮೂಲಕ ಮುರುಘಾ ಶ್ರೀ, ಬಸವರಾಜನ್ ನಡುವಿನ ಸಂಧಾನ ಯಶಸ್ವಿಯಾಗಿದೆ.
ಸಂಧಾನ ಸಭೆಯಲ್ಲಿ ಮಠಾಧೀಶರು, ಮುಖಂಡರು ಭಾಗಯಾಗಿದ್ದರು. ಇತ್ತ ತಮ್ಮ ಮೇಲಿನ ಲೈಂಗಿಕ ಆರೋಪದ ಬಗ್ಗೆ ಶ್ರೀಗಳು ಮಾತಾಡಿದ್ದು, ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಪಿತೂರಿ, ಒಳಸಂಚು ಮಾಡಿದ್ದಾರೆ.ಅಲ್ಲದೇ ನಾವು ಸಂಧಾನಕ್ಕೂ ಸಿದ್ಧ, ಸಮರಕ್ಕೂ ಬದ್ಧ.
ಸಂಧಾನ ಮತ್ತು ಸಮರ. ೨ ಆಯ್ಕೆಗಳು ಇವೆ ಎಂದು ಮುರುಘಾಶ್ರೀಗಳು ಹೇಳಿದ್ದರು.ವೈದ್ಯಕೀಯ ಪರೀಕ್ಷೆ:ಈ ನಡುವೆ ಲೈಂಗಿಕ ದೌರ್ಜನ್ಯ ಪ್ರಕರಣವು ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರ ಜೊತೆಗೆ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ.
ಸಂತ್ರಸ್ತೆಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಕರೆತಂದು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ.ಬಾಲಕಿಯರನ್ನು ಸಿಡಬ್ಲ್ಯೂಸಿಯಲ್ಲಿ ಕೌನ್ಸಿಲಿಂಗ್ ಅಧಿಕಾರಿಗಳ ಮುಂದೆ ಹಾಜರು ಪಡಿಸಿ ಘಟನೆಯ ವಿವರವನ್ನು ಪಡೆದುಕೊಳ್ಳಲಾಗುತ್ತದೆ. ಇದನ್ನು ವೀಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಬಾಲಕಿಯರ ಹೇಳಿಕೆಯನ್ನು ಆಧರಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಸಿಡಬ್ಲ್ಯೂಸಿಯಲ್ಲಿ ದೂರು ನೀಡಿದಂತೆಯೇ ಹೇಳಿಕೆ ನೀಡಿ ವೈದ್ಯಕೀಯ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾದರೆ ಆರೋಪಿಗಳನ್ನೂ ಕೂಡ ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ.ಒಡನಾಡಿಯಲ್ಲೇ ವಸತಿ:ಆರೋಪ ಸಾಬೀತಾದರೆ ಜಾಮೀನು ಸಿಗುವುದಿಲ್ಲ.
ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಪರಶುರಾಮ್ ಹೇಳಿಕೆ ನೀಡಿದ್ದು, ಸಂತ್ರಸ್ತ ಬಾಲಕಿಯರಿಗೆ ಎಸ್ಕಾರ್ಟ್ ಭದ್ರತೆ ಒದಗಿಸಲಿದೆ. ವಿಚಾರಣೆ ಮುಗಿದ ಬಳಿಕ ವಾಪಸ್ ಕರೆತಂದು ಒಡನಾಡಿಯಲ್ಲೇ ಪುನರ್ ವಸತಿ ಕಲ್ಪಿಸುತ್ತೇವೆ ಎಂದಿದ್ದಾರೆ.
ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಮಠಕ್ಕೆ ಭಕ್ತಾದಿಗಳು, ಜನಪ್ರತಿನಿಧಿಗಳು ವಿವಿಧ ಮಠಾಧೀಶರು ಆಗಮಿಸಿ ಮುರುಘಾ ಶರಣರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಸದ್ಯ ರಾಜ್ಯದಲ್ಲಿ ಪ್ರಕರಣ ಕಾವು ಪಡೆದುಕೊಂಡಿದ್ದು ಮುಂದೆ ಯಾವ ಹಂತ ತಲುಪಲಿದೆ ಎಂದು ಕಾದುನೋಡಬೇಕಾಗಿದೆ.
ಶ್ರೀಗಳು ಆರೋಪ ಮುಕ್ತರಾಗಲಿಚಿತ್ರದುರ್ಗದ ಮುರುಘಾ ಶ್ರೀಗಳ ಮೇಲಿನ ಆರೋಪ ಸುಳ್ಳು, ಅವರು ಆರೋಪ ಮುಕ್ತರಾಗಿ ಹೊರ ಬರಲಿದ್ದಾರೆ ಎಂಬ ವಿಶ್ವಾಸ ತಮ್ಮದು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳದ ಸುಳ್ಳು ಆರೋಪ ಮಾಡಲಾಗಿದೆ.
ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.ತನಿಖೆಯಾದ ಮೇಲೆ ಸತ್ಯಾಂಶ ಹೊರಬರುತ್ತದೆ. ಶ್ರೀಗಳು ಆರೋಪಮುಕ್ತರಾಗಿ ಬರುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದರು.