
ತಮಿಳು ನಟ ಸೂರ್ಯ ಅವರಿಗೆ ‘ಸೂರರೈ ಪೋಟು’ ಸಿನಿಮಾದಲ್ಲಿನ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಅಷ್ಟೇ ಅಲ್ಲದೆ ಈ ಚಿತ್ರ ಒಟ್ಟಾರೆಯಾಗಿ 5 ರಾಷ್ಟ್ರ ಪ್ರಶಸ್ತಿ ಬಾಚಿಕೊಂಡಿದೆ.
ಕೊರೊನಾ, ಲಾಕ್‌ಡೌನ್ ಕಾರಣಕ್ಕೆ ಈ ಚಿತ್ರ ನೇರವಾಗಿ ಓಟಿಟಿಯಲ್ಲಿ ರಿಲೀಸ್ ಆಗಿತ್ತು.’
ಕ್ಯಾಪ್ಟನ್ ಗೋಪಿನಾಥ್ ಅವರ ‘ಸಿಂಪ್ಲಿ ಫೈ’ ಕೃತಿಯನ್ನು ಆಧರಿಸಿ, ಕನ್ನಡಿಗ ಕ್ಯಾಪ್ಟನ್ ಜಿ.ಆರ್. ಗೋಪಿನಾಥ್ ಅವರ ನಿಜಜೀವನದ ಘಟನೆಗಳ ಕುರಿತಾಗಿ ‘ಸೂರರೈ ಪೋಟ್ರು’ ಸಿನಿಮಾ ಮೂಡಿಬಂದಿತ್ತು.
ಸೂರ್ಯ ಅವರಿಗೆ ನಾಯಕಿಯಾಗಿ ಅಪರ್ಣಾ ಬಾಲಮುರಳಿ ನಟಿಸಿದ್ದರು. ಊರ್ವಶಿ, ಪ್ರಕಾಶ್ ಬೆಳವಾಡಿ, ಅಚ್ಯುತ್‌ಕುಮಾರ್, ಪರೇಶ್ ರಾವಲ್, ಕಾಳಿ ವೆಂಕಟ್ ಮುಂತಾದವರು ಪೋಷಕ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ.