ತಲೆಮೇಲೆ ಬಸ್‌ಹರಿದು ಬೈಕ್‌ಸವಾರ ಸಾವು

ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರನ ತಲೆಮೇಲೆ ಬಸ್ ಚಕ್ರ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಬಿಬಿ ರಸ್ತೆಯಲ್ಲಿ ನಡೆದಿದೆ.
ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಗ್ರಾಮದ ಮುರುಳಿ ಮೃತಪಟ್ಟವರು. ದೇವನಹಳ್ಳಿ ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ತನ್ನ ಹೊಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದ ಮುರಳಿ, ಗಿರಿಯಾಸ್ ಶೋ ರೂಂ ಮುಂಭಾಗದಲ್ಲಿ ಏಕಾಏಕಿ ಬ್ರೇಕ್ ಹಾಕಿದ್ದಾರೆ.
ತಕ್ಷಣ ಗಾಡಿ ಸ್ಕಿಡ್ ಆಗಿದ್ದು ಮುರುಳಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.ಈ ಸಂದರ್ಭ ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರಕ್ಕೆ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿ ಚಕ್ರಕ್ಕೆ ಮುರಳಿ ತಲೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದರೆ ಈ ವಿಷಯ ಬಸ್ ಚಾಲಕನಿಗೆ ಗೊತ್ತಾಗದೆ ನಿಲ್ಲಿಸದೆ ತೆರಳಿದ್ದಾನೆ. ಬಳಿಕ ಸ್ಥಳೀಯರು ಸರ್ಕಾರಿ ಬಸ್ ಅನ್ನು ತಡೆದು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದು ಪ್ರಕರಣ ದಾಖಲಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.