
ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾ ಪಟ್ಟಿಯನ್ನು ಈ ತಿಂಗಳ ಕೊನೆ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಿಂಗಳಾಂತ್ಯಕ್ಕೆ ದಿನಾಂಕವನ್ನು ಪ್ರಕಟಿಸಲಾಗುವುದು.
ಆಯಾ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಇದರ ಮಾಹಿತಿಯನ್ನು ಪಡೆಯಬಹುದು ಎಂದು ಅವರು ಸಲಹೆ ಮಾಡಿದರು. ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸಲು ಇದೇ ತಿಂಗಳು 24 ಕಡೆಯ ದಿನವಾಗಿದ್ದು, ದಂಡ ಸಹಿತವಾಗಿ ಜುಲೈ 4 ಕೊನೆಯ ದಿನವಾಗಿದೆ.
ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಇದೇ ತಿಂಗಳ 27ರಂದು ಖಜಾನೆಗೆ ಸಂದಾಯ ಮಾಡಬಹುದು. ದಂಡ ಸಹಿತವಾಗಿ ಜು.7 ಕಡೆಯ ದಿನ.
ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಇದೇ 28ರಂದು ಸಲ್ಲಿಸಲು ಕೊನೆಯ ದಿನ, ಜುಲೈ 6 ದಂಡ ಸಹಿತ ಕಡೆಯ ದಿನವಾಗಿದೆ.
ಪೂರಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳು ಒಂದು ವಿಷಯಕ್ಕೆ 140, ಎರಡು ವಿಷಯಕ್ಕೆ 270, ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಒಂದು ವಿಷಯಕ್ಕೆ 50 ರೂ. ಪಾವತಿಸಬೇಕು.