ತೂಕ ಇಳಿಸುವ ಮಾತ್ರೆ ಸೇವಿಸಿ ಯುವಕ ಸಾವು

ತೂಕ ಇಳಿಸಿಕೊಳ್ಳೋ ಭರದಲ್ಲಿ ತಾಂಬರಂನಲ್ಲಿ ತೂಕ ಇಳಿಸುವ ಮಾತ್ರೆ ಸೇವಿಸಿದ 21 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಪಿ ಸೂರ್ಯ (21) ಎಂದು ಗುರುತಿಸಲಾಗಿದೆ.
ಕಾಂಚೀಪುರಂನ ಶ್ರೀಪೆರಂಬದೂರು ಸಮೀಪದ ಸೋಮಂಗಲಂನಲ್ಲಿ ಹಾಲಿನ ಸಂಸ್ಥೆಯೊಂದರಲ್ಲಿ ವಿತರಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥೂಲಕಾಯದಿಂದ ಬಳಲುತ್ತಿದ್ದ ಸೂರ್ಯ ಅವರಿಗೆ ಕಳೆದ ತಿಂಗಳುಗಳಿಂದ ತೂಕ ಕಡಿಮೆ ಮಾಡಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು.ಡಿಸೆಂಬರ್ 22 ರಿಂದ ಸ್ನೇಹಿತರ ಸಲಹೆಗಳ ಆಧಾರದ ಮೇಲೆ ಮಾತ್ರೆಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು.
ಔಷಧಗಳ ಡೋಸೇಜ್ ಮತ್ತು ಅಂಶಗಳ ಬಗ್ಗೆ ವಿಚಾರಣೆಗೆ ಹಾಜರಾಗಲು ಖಾಸಗಿ ಕಂಪನಿಗೆ ಕರೆ ಮಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಂಪನಿಯು ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಕಾರಣ ಸೂರ್ಯ ಪ್ರಿಸ್ಕ್ರಿಪ್ಷನ್ ಇಲ್ಲದೆ ನೇರವಾಗಿ ವೈಟ್ ಲಾಸ್ ಪಿಲ್ಸ್ಗಳು ಅವರಿಗೆ ಲಭ್ಯವಾಗಿದೆ.
ಮಾತ್ರೆಗಳನ್ನು ಸೇವಿಸಿದ ಹತ್ತು ದಿನಗಳಲ್ಲಿ ಅವರ ದೇಹ ದಲ್ಲಿ ತೀವ್ರ ಬದಲಾವಣೆ ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಜನವರಿ 1ರಂದು ಸೂರ್ಯ ತನ್ನ ಮನೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೂರ್ಯನ ತಂದೆ ಪಾಳಯಂ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.