ಅಪಘಾತರಾಷ್ಟ್ರಿಯ

ತೆಲಂಗಾಣದ ಸಿಕಂದರಾಬಾದ್‌ನಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿ ಮಂಗಳವಾರ ಮುಂಜಾನೆ ಅಗ್ನಿ ಅವಘಡ

ಹೈದರಾಬಾದ್: ತೆಲಂಗಾಣದ ಸಿಕಂದರಾಬಾದ್‌ನಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ ಒಂದರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ.

ಕಟ್ಟಡದ ನೆಲಮಹಡಿಯಲ್ಲಿರುವ ರೂಬಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶೀಘ್ರವೇ ಇದು ಮೊದಲ ಮತ್ತು ಎರಡನೇ ಮಹಡಿಗೆ ಹರಡಿತು. ಇದರಿಂದ ಎಂಟು ಜನರು ಸಾವನ್ನಪ್ಪಿದ್ದಾರೆ.

ಕನಿಷ್ಠ 13 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇವರಲ್ಲಿ ಹೆಚ್ಚಿನವರು ಹೊಗೆಯಿಂದ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ವಿವರ ನೀಡಿದ್ದಾರೆ.

ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಹಲವಾರು ಜನರು ಕಟ್ಟಡದ ಮೇಲಿನ ಮಹಡಿಯಿಂದ ಜಿಗಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ನಂತರ ಇವರನ್ನೆಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸ್ಥಳದಲ್ಲಿ ಹಲವಾರು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮೆಹಮೂದ್ ಅಲಿ, ‘ಬೆಂಕಿ ಅವಘಡದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಬೆಂಕಿಗೆ ಕಾರಣವನ್ನು ಪತ್ತೆ ಹೆಚ್ಚಲು ತನಿಖೆಯನ್ನು ಪ್ರಾರಂಭಿಸಲಾಗಿದೆ’ ಎಂದು ತಿಳಿಸಿದ್ದಾರೆ.

“ಅಗ್ನಿಶಾಮಕ ದಳದ ತಂಡಗಳು ಲಾಡ್ಜ್‌ನಿಂದ ಜನರನ್ನು ರಕ್ಷಿಸಲು ಸಾಧ್ಯವಾದಷ್ಟು ಪ್ರಯತ್ನಿಸಿದವು. ಆದರೂ ಭಾರೀ ಹೊಗೆಯಿಂದಾಗಿ ಕೆಲವರು ಸಾವನ್ನಪ್ಪಿದ್ದಾರೆ.

ಘಟನೆ ಹೇಗೆ ಸಂಭವಿಸಿತು ಎಂಬುದನ್ನು ನಾವು ತನಿಖೆ ಮಾಡುತ್ತಿದ್ದೇವೆ,” ಎಂದು ಅವರು ಮಾಹಿತಿ ನೀಡಿದ್ದಾರೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button