ಅಪಘಾತ
ದಟ್ಟ ಮಂಜು ; ಟ್ರಕ್‍ಗೆ ಬಸ್ ಅಪ್ಪಳಿಸಿ ಮೂರು ಸಾವು

ವೇಗವಾಗಿ ಸಂಚರಿಸುತ್ತಿದ್ದ ಬಸ್ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದು ಮೂರು ಮಂದಿ ಸಾವನ್ನಪ್ಪಿ ಇತರ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಕ್ನೋ-ಆಗ್ರಾ ಎಕ್ಸ್‍ಪ್ರೆಸ್‍ವೇಯಲ್ಲಿ ನಡೆದಿದೆ.ಉತ್ತರಪ್ರದೇಶದ ಥಾಥೀಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಟ್ಟವಾದ ಮಂಜು ತುಂಬಿದ್ದರಿಂದ ಬಸ್ ಚಾಲಕನಿಗೆ ರಸ್ತೆಯಲ್ಲಿ ನಿಂತಿದ್ದ ಟ್ರಕ್ ಕಾಣಿಸದ ಹಿನ್ನೆಲೆಯಲ್ಲಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್‍ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಅವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, 18ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಉತ್ತರ ಭಾರತದಾದ್ಯಂತ ದಟ್ಟವಾದ ಮಂಜು ಆವರಿಸಿದ್ದು, ಕಳೆದ ಹಲವು ದಿನಗಳಿಂದ ಹಲವಾರು ಅಪಘಾತಗಳು ಸಂಭವಿಸಿವೆ.
ಹೀಗಾಗಿ ವಾಹನಗಳನ್ನು ಎಚ್ಚರಿಕೆಯಿಂದ ಚಲಾಯಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.