ದೀಪಾವಳಿ ಹಬ್ಬಕ್ಕೆ ೧೫೦೦ ಹೆಚ್ಚುವರಿ ಬಸ್ ಸೇವೆ

ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಿಂದ ಪ್ರಯಾಣಿಕರಿಗಾಗಿ ೧೫೦೦ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಅ. ೨೪ ನರಕ ಚತುದರ್ಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರಾವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರುಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಸ್ಥಳಗಳಿಗೆ ತೆರಳಲು ವಿಶೇಷ ಬಸ್ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾ ಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಲ್ಲಿ ಬಸ್ ಗಳು ಸಂಚರಿಸಲಿವೆ.
ತಮಿಳುನಾಡು ಮತ್ತು ಕೇರಳ ಕಡೆಗೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲ್ಕಾಡ್, ತ್ರಿಶೂಲ್, ಎರ್ನಾಕುಲಂ, ಕಲ್ಲಿಕೋಟೆ ಸ್ಥಳಗಳಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಗಳೂರು ನಗರ ವಿಜಯನಗರ, ಜಯನಗರ ೪ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರ ೧೮ನೇ ಅಡ್ಡರಸ್ತೆ, ಬನಶಂಕರಿ, ಜೀವನ್‌ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪು, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಸೇರಿದಂತೆ ಇತರ ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಒದಗಿಸಲಾಗಿದೆ.
ಕರ್ನಾಟಕ ಹಾಗೂ ಅಂತರರಾಜ್ಯಗಳಲ್ಲಿರುವ ೬೯೧ ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡ ಟಿಕೆಟ್‌ಗಳನ್ನು ಕಾಯ್ದಿರಿಸಬಹುದಾಗಿದೆ. ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇ. ೫ ರಷ್ಟು ರಿಯಾಯಿತಿ ನೀಡಲಾಗುವುದು. ಒಟ್ಟಿಗೆ ಕಾಯ್ದಿರಿಸಿದರೆ ಶೇ. ೧೦ ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.