Uncategorized

ನಡು ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕೈ ಕೈ ಮಿಲಾಯಿಸಿದ ಘಟನೆ ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ನಡು ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕೈ ಕೈ ಮಿಲಾಯಿಸಿದ ಘಟನೆ ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದೆ. ಖಾಸಗಿ ಶಾಲಾ ಬಾಲಕಿಯರ ಜಡೆ ಜಗಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸುಮಾರು 20 ವಿದ್ಯಾರ್ಥಿನಿಯರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ.ಗಲಾಟೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು ಸಹ ಭಾಗಿಯಾಗಿದ್ದರು. ನಡುರಸ್ತೆಯಲ್ಲಿ ಜಡೆ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಲಾಟೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ಯಾವುದೇ ರೀತಿ ಕೇಸ್ ದಾಖಲಾಗಿಲ್ಲ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button