ರಾಜಕೀಯ

ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ನೀವು ಮನೆಯಿಂದ ಹೊರಬರೋಕೂ ಕಷ್ಟ ಆಗ್ಬಬಹುದು: ಗುಡುಗಿದ ಟಗರು

ಬೆಂಗಳೂರು: ಕೊಡಗಿನಲ್ಲಿ ಮಳೆ ಹಾನಿ ಸಂತ್ರಸ್ತರ ಭೇಟಿಗೆ ತೆರಳಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರ್‌ಗೆ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ ವಿರುದ್ಧ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ.

ಬಿಜೆಪಿ ಕಾರ್ಯಕರ್ತರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರು ಮಾಡಬೇಡಿ.

ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡಾ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ? ಸಿದ್ದರಾಮಯ್ಯ ಗುಟುರು ಹಾಕಿದ್ದಾರೆ.

ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು ಎಂದಿರುವ ಸಿದ್ದರಾಮಯ್ಯ, ಬಿಜೆಪಿಯವರು ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರು, ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ? ಶಿವಮೊಗ್ಗದ ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ.

ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರೆಸ್ಸೆಸ್‌ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ ಎಂದು ಕಿಡಿಕಾರಿರುವ ಸಿದ್ದರಾಮಯ್ಯ, ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ.

ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು, ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗೆ ಮಾಡಿದ ತಮ್ಮದೇ ಪಕ್ಷದ ಕಾರ್ಯಕರ್ತರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?

ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಸಾವರ್ಕರ್ ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ 52 ವರ್ಷಗಳ ಕಾಲ ಆರೆಸ್ಸೆಸ್‌ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ ಇಲ್ಲ, ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ.

ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ ಎಂದಿರುವ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದರು.

ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ ಎಂದು ಟೀಕಿಸಿದ್ದಾರೆ

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button