ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

ಬೆಂಗಳೂರು: ನಾಳೆಯಿಂದ ಅಂದರೆ ಆಗಸ್ಟ್ 12ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆರಂಭವಾಗಲಿದೆ. ನಾಳೆಯಿಂದ 25-08-2022ರವರೆಗೆ ನಡೆಯಲಿರುವ ಪೂರಕ ಪರೀಕ್ಷೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿಯನ್ನು ಸಹ ರಚಿಸಲಾಗಿದೆ.
ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಇರಲಿದ್ದಾರೆ. ಇದಲ್ಲದೆ, ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶ ನಿಷೇಧ ವಿಧಿಸಲಾಗಿದೆ.
ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಕೆ ಮಾಡಲಾಗಿದ್ದು, ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗುವುದು ಎಂದು ಹೇಳಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ: ದಿನಾಂಕ 12-08-2022 – ಕನ್ನಡ, ಅರೇಬಿಕ್ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರದಿನಾಂಕ 16-08-2022 – ಹಿಂದಿದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನದಿನಾಂಕ 22-08-2022 – ಇಂಗ್ಲೀಷ್ದಿನಾಂಕ 23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರದಿನಾಂಕ 25-08-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ