ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಮಾಡಿಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಮೂಲದ ಬಗ್ಗೆ ನೀಡಿದ ಹೇಳಿಕೆ ವಿಚಾರವಾಗಿ ಮಾತನಾಡಿ, ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದಾರೆ.
ಬಿಜೆಪಿಯವರು ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ. ನಮ್ಮದು ಸನಾತನ ಧರ್ಮ. ನಮಗೆ ಹಿಂದೂ ಧರ್ಮದ ಬಗ್ಗೆ ಗೌರವ ಇದೆ ಎಂದರಲ್ಲದೆ, ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಮಾಡಿಲ್ಲ. ನಮ್ಮ ಸರ್ಕಾರ ಇದ್ದಾಗ ಹೆಚ್ಚು ಅನುದಾನ ಕೊಡಲಾಗಿದೆ.
ಬಿಜೆಪಿಯವರು ಏನೂ ಕೊಡದೆ ಪ್ರಚಾರ ಪಡೆಯುತ್ತಾರೆ ಎಂದು ಟೀಕಿಸಿದರು.ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಮಾಡಿಲ್ಲ. ನಮ್ಮ ಸರ್ಕಾರ ಇದ್ದಾಗ ಹೆಚ್ಚು ಅನುದಾನ ಕೊಡಲಾಗಿದೆ. ಬಿಜೆಪಿಯವರು ಏನೂ ಕೊಡದೆ ಪ್ರಚಾರ ಪಡೆಯುತ್ತಾರೆ. ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತನಾಡಿಲ್ಲ.
ವಿಕಿಪೀಡಿಯಾದಲ್ಲಿ ಇರೋದನ್ನು ಹೇಳಿದ್ದಾರೆ ಎಂದರು. ಬಿಜೆಪಿಯವರು ಅದನ್ನು ತಮಗೆ ಬೇಕಾದಂತೆ ಮಾತನ್ನಾಡುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ, ಸುರ್ಜೇವಾಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.ಸತೀಶ್ ಜಾರಕಿಹೊಳಿ ಹಿಂದು ಧರ್ಮವನ್ನು ನಿಜವಾಗಲೂ ಪಾಲಿಸುವವರು.
ಅವರು ಯಾವ ಅರ್ಥದಲ್ಲಿ ಹೇಳಿದ್ದಾರೊ ಗೊತ್ತಿಲ್ಲ ಎಂದರು.ಮೌಡ್ಯ ವಿರೋಧ ಅಭಿಯಾನಗಳನ್ನು ಸಕ್ರಿಯವಾಗಿ ನಡೆಸುತ್ತಿರುವ ಸತೀಶ್ ಜಾರಕಿಹೊಳಿ ಹಿಂದೂ ಪದದ ಮೂಲದ ಬಗ್ಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಹಿಂದೂ ಎಂಬ ಪದವು ಪರ್ಷಿಯನ್ ಮೂಲದ್ದು. 1963 ರಲ್ಲಿ ಒಂದು ಶಬ್ಧಕೋಶ ಹೊರತರಲಾಗಿದೆ. ಅದರಲ್ಲಿ ಹಿಂದೂ ಎಂಬ ಪದಕ್ಕೆ ಅಶ್ಲೀಲ ಅರ್ಥಗಳನ್ನು ನೀಡಲಾಗಿದೆ ಎಂದು ಹೇಳಿದ್ದರು.