Uncategorized

ನಿತ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿವೆ ಎನ್ನಲಾಗಿದೆ.

ಬೆಂಗಳೂರು: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ( Street Dog ) ಹಾವಳಿ ಹೆಚ್ಚಾಗುವಂತೆ ಆಗಿದೆ. ಪಾಲಿಕೆ ಮೂಲಕಗಳ ಪ್ರಕಾರ ನಿತ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿವೆ ಎನ್ನಲಾಗಿದೆ.ಈ ಮೂಲಕ ಬೆಂಗಳೂರಿಗರೇ ಬೆಚ್ಚಿ ಬೀಳುವಂತೆ ಮಾಡಿದೆ.
ಪಾಲಿಕೆಯ ಮೂಲಗಳ ಪ್ರಕಾರ 2020ರ ಜನವರಿಯಿಂದ ಈವರೆಗೆ ಸುಮಾರು 52 ಸಾವಿರಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಇನ್ನೂ 2020ರ ಫೆಬ್ರವರಿಯಲ್ಲಿ ನಾಯಿಯ ಕಡಿತಕ್ಕೆ ಒಳಗಾದಂತ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಲ್ಲಿ 15 ಸಾವಿರಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಇದರಿಂದ ವೃದ್ಧರು, ಮಕ್ಕಳು ಮನೆಯಿಂದ ಹೊರ ಬರಲು ಆತಂಕ ಪಡುವಂತ ಪರಿಸ್ಥಿತಿ ಇದೆ. ಇದೇ ಕಾರಣದಿಂದಾಗಿ ನಾಯಿಗಳ ಶಸ್ತ್ರಚಿಕಿತ್ಸೆ ಕಾರ್ಯ ಜೋರಾಗಿ ನಡೆಯುತ್ತಿದ್ದು 8 ವಲಯಗಳಲ್ಲಿ ನಿತ್ಯ 800 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ ಎನ್ನಲಾಗಿದೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button