ಬೆಂಗಳೂರು

ನಿಮ್ಹಾನ್ಸ್‌ ಆವರಣದಲ್ಲಿ ಬೀದಿ ನಾಯಿ ಹಾವಳಿ ತಡೆಗೆ ಕ್ರಮ: ಹೈಕೋರ್ಟ್‌ಗೆ ಭರವಸೆ ನೀಡಿದ ಬಿಬಿಎಂಪಿ

ಬೆಂಗಳೂರು: ನಗರದ ಹೊಸೂರು ರಸ್ತೆಯಲ್ಲಿರುವ ನಿಮ್ಹಾನ್ಸ್‌ ಆಸ್ಪತ್ರೆ ಮತ್ತು ಅದರ ವಸತಿ ಸಂಕೀರ್ಣದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ನಿಮ್ಹಾನ್ಸ್‌ ಹೈಕೋರ್ಟ್‌ಗೆ ಭರವಸೆ ನೀಡಿದೆ.

ಅದನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ, ಬೀದಿ ನಾಯಿ ಕಡಿತಕ್ಕೆ ತುತ್ತಾಗಿದ್ದ 9 ವರ್ಷದ ಬಾಲಕಿ ಸಲ್ಲಿಸಿದ್ದ ಪಿಐಎಲ್‌ ವಿಲೇವಾರಿ ಮಾಡಿದೆ.

ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಜಿಷ್ಣು ಎಂಬಾಕೆ ಸಲ್ಲಿಸಿದ್ದ ಅರ್ಜಿಯು ನ್ಯಾ.ಎಸ್‌.ಜಿ ಪಂಡಿತ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರತಿವಾದಿಗಳಾದ ಬಿಬಿಎಂಪಿ ಮತ್ತು ನಿಮ್ಹಾನ್ಸ್‌ ಸಂಸ್ಥೆಗಳೇ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ನಿರ್ದೇಶನಗಳನ್ನು ನೀಡುವ ಅಗತ್ಯವಿಲ್ಲವೆಂದು ಅಭಿಪ್ರಾಯಪಟ್ಟು, ಅರ್ಜಿ ಇತ್ಯರ್ಥಪಡಿಸಿತು.

ಅಲ್ಲದೆ, ಬೀದಿ ನಾಯಿ ಕಡಿತಕ್ಕೆ ತುತ್ತಾದವರಿಗೆ ಪರಿಹಾರ ನೀಡುವ ಸಂಬಂಧ ಸೂಕ್ತ ಮಾರ್ಗಸೂಚಿ ಸಿದ್ಧಪಡಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ನಿಮ್ಹಾನ್ಸ್‌ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಕುರಿತು ದೂರು ಸ್ವೀಕರಿಸಿದ ಕೂಡಲೇ ತಾವೇ ಸ್ಥಳಕ್ಕೆ ಖುದ್ದು ಭೇಟಿಯಾಗಿ ನಾಯಿಗಳನ್ನು ಹಿಡಿಯಲು ಮತ್ತು ಅವುಗಳಿಗೆ ರೇಬಿಸ್‌ ಚುಚ್ಚುಮದ್ದು ಕೊಡಿಸಲು ಮತ್ತು ಅವುಗಳ ಸಂತತಿ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಚಾರಣೆ ವೇಳೆ ಹೇಳಿದರು.

ನಿಮ್ಹಾನ್ಸ್‌ ನಿರ್ದೇಶಕರು ಸಹ ಹೈಕೋರ್ಟ್‌ಗೆ ತಮ್ಮ ಹೇಳಿಕೆ ಸಲ್ಲಿಸಿದ್ದು, ಅದರಲ್ಲಿ ಸಂಸ್ಥೆಯ ಆವರಣದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಲು ಮತ್ತು ಸ್ಥಳೀಯ ಬಿಬಿಎಂಪಿ ಅಧಿಕಾರಿಗಳ ಸಂಪರ್ಕದಲ್ಲಿ ಇದ್ದುಕೊಂಡು ಪ್ರಾಣಿಗಳ ಜನನ ನಿಯಂತ್ರಣ ಮತ್ತು ಲಸಿಕೀಕರಣ ನೋಡಿಕೊಳ್ಳಲು 2021ರ ಅ.27ರಂದು ಸಮಿತಿ ರಚನೆ ಮಾಡಲಾಗಿದೆ.

ಅದು ಇಡೀ ಸಂಸ್ಥೆ ಮತ್ತು ಅದರ ವಸತಿ ಸಂಕೀರ್ಣದ ಆವರಣದಲ್ಲಿನ ಬೀದಿ ನಾಯಿಗಳ ಮೇಲೆ ನಿಗಾ ವಹಿಸಲಿದೆ. ಜತೆಗೆ ಬೀದಿಗಳ ಹಾವಳಿ ನಿಯಂತ್ರಣಕ್ಕೆ ಸಾಧ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.

ರೋಗಗ್ರಸ್ಥ ನಾಯಿ ಪ್ರತ್ಯೇಕವಾಗಿಡಲು ನಿರ್ದೇಶನಪ್ರಾಣಿಗಳ ಜನನ ನಿಯಂತ್ರಣ ನಿಯಮ- 2001ರ ಪ್ರಕಾರ, ರೋಗಗ್ರಸ್ಥ ಅಥವಾ ಕಿವುಡ ಬೀದಿ ನಾಯಿಗಳನ್ನು ಅವುಗಳು ಸಾಯುವವರೆಗೆ ಐಸೋಲೇಷನ್‌ ಕೇಂದ್ರಗಳಲ್ಲಿಡಬೇಕು. ಅಂತಹ ನಾಯಿಗಳೇ ಮಕ್ಕಳೂ ಸೇರಿದಂತೆ ವಯಸ್ಕ ಜನರ ಮೇಲೆರಗಿ ಹೆಚ್ಚಿನ ಕಾಟ ನೀಡುವುದರಿಂದ ಅವುಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ನ್ಯಾಯಾಲಯ ಆದೇಶಿಸಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button