ರಾಜ್ಯ
ನೀಟ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವತಿ ಆತ್ಮಹತ್ಯೆ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ಫೇಲಾದ ಕಾರಣ 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಅಂಬತ್ತೂರಿನಲ್ಲಿ ನಡೆದಿದೆ.
ನಿನ್ನೆ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ರಾಜ್ಯದಲ್ಲಿ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಇದೇ ಮೊದಲಲ್ಲ.
ಪರೀಕ್ಷೆಗೆ ಒಂದು ದಿನ ಮೊದಲು, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ತಮಿಳುನಾಡಿನ ಅರಿಯಲೂರಿನಲ್ಲಿ ಹುಡುಗಿಯೊಬ್ಬಳು ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು.ಮತ್ತೊಂದು ಪ್ರಕರಣದಲ್ಲಿ ಜುಲೈ ಆರಂಭದಲ್ಲಿ 18 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ.
ನೀಟ್ ಪರೀಕ್ಷೆಯನ್ನು ತುಂಬ ಕಷ್ಟವಿತ್ತು. ಬಯಸಿದ ಅಂಕಗಳನ್ನು ಗಳಿಸಲು ಸಾಧ್ಯವಾಗದ ಕಾರಣ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟಿದ್ದ.