Uncategorized

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಪುನಾರಚನೆ ಇಲ್ಲ: ಸಿಎಂ ಬೊಮ್ಮಾಯಿ

ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ.

ಮತ್ತೆ ಹೊಸ ಸಮಿತಿ ಮಾಡುವ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.

ಪಠ್ಯಪುಸ್ತಕದಲ್ಲಿ ಕೆಲವು ಗೊಂದಲಗಳು ಉಂಟಾಗಿದ್ದರಿಂದ ನಿನ್ನೆ ನಾನೇ ಖುದ್ದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಕರೆಸಿ ಪುಸ್ತಕಗಳನ್ನು ಪರಿಶೀಲಿಸಿದ್ದೇನೆ.

ಎಲ್ಲೆಲ್ಲಿ ಲೋಪದೋಷಗಳಿವೆಯೋ ಅದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.ಬಸವಣ್ಣನವರ ಬಗ್ಗೆ ಸಾಣೆಹಳ್ಳಿ ಮಠದ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪಠ್ಯ ಪುಸ್ತಕದಲ್ಲಿ ಎಲ್ಲಿಯೂ ಕೂಡ ಅವರಿಗೆ ಅಗೌರವ ಸೂಚಿಸುವಂತಹ ಪದ ಬಳಕೆ ಮಾಡಿಲ್ಲ. ಗೊಂದಲಗಳಿದ್ದರೆ ಶ್ರೀಗಳ ಜೊತೆ ನಾನು ಮಾತುಕತೆ ನಡೆಸುತ್ತೇನೆ ಎಂದರು.

2015ರಲ್ಲಿ ಅಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದ ಬರಗೂರು ರಾಮಚಂದ್ರಪ್ಪ ಅವರು ಏನು ಉಲ್ಲೇಖ ಮಾಡಿದ್ದಾರೋ ಅದನ್ನೇ ಯಥಾವತ್ತಾಗಿ ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಲಾಗಿದೆ.

ಅಂದು ಇದರ ಬಗ್ಗೆ ವಿರೋಧ ವ್ಯಕ್ತಪಡಿಸಲಿಲ್ಲ. ಈಗ ಏಕೆ ವಿರೋಧ ಎಂದು ಸಿಎಂ ಪ್ರಶ್ನಿಸಿದರು.ಪಠ್ಯ ಪುಸ್ತಕದಲ್ಲಿ ಕೆಲವು ಲೋಪದೋಷಗಳು ಕಂಡುಬಂದಿದ್ದರಿಂದ ಸರಿಪಡಿಸಿ ಮುದ್ರಿಸಲು ಸ್ವಲ್ಪ ಸಮಯ ಅವಕಾಶ ಬೇಕಾಗುತ್ತದೆ.

ಈಗಾಗಲೇ ಶೈಕ್ಷಣಿಕ ಅವಧಿ ಆರಂಭವಾಗಿರುವುದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಆದಷ್ಟು ಶೀಘ್ರ ಪ್ರಕಟಿಸಿ ವಿತರಣೆ ಮಾಡಲು ಸೂಚನೆ ನೀಡುವುದಾಗಿ ಹೇಳಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button