
ಮುಂದಿನ ತಿಂಗಳಿಂದ 5 ಕೆಜಿ ಅಕ್ಕಿಕಡಿತ ಮಾಡುವುದಾಗಿ ಸರ್ಕಾರ ಹೇಳಿರುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, ಧರಿದ್ರ ಸರ್ಕಾರ. ಅಧಿಕಾರ ಬಿಟ್ಟು ತೊಲಗಲಿ . ಅನ್ನಭಾಗ್ಯ ಯೋಜನೆಯಿಂದ ಬಡವರು ಕೂಲಿ ಕಾರ್ಮಿಕರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು. ಬಡವರು ನೆಮ್ಮದಿಯಿಂದ ಮೂರು ಹೊತ್ತು ಊಟ ಮಾಡುತ್ತಿದ್ದರು.
ಇವರಿಗೆ ಬಡವರ ಹಿತ ಕಾಯುವ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟುತೊಲಗಲಿ. ಬಡವರ ರಕ್ತ ಹೀರುವ ಕೆಲಸ ಮಾಡಬೇಡಿ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ ಕಾರಿದರು.