ರಾಜ್ಯ

ಪರಿಷತ್ತಿನಲ್ಲಿ ಬೆಂಗಳೂರು ರಸ್ತೆಗುಂಡಿ ಪ್ರತಿಧ್ವನಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ರಸ್ತೆ ಗುಂಡಿಗಳಿಂದ ಆಗುತ್ತಿರುವ ಅನಾಹುತಗಳ ವಿಷಯ ಇಂದು ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು. ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್, ರಾಜಧಾನಿ ಬೆಂಗಳೂರಿನ ಎಂಟು ವಲಯಗಳಲ್ಲಿ ೧೩ ಸಾವಿರ ಕಿಲೋ ಮೀಟರ್ ರಸ್ತೆ ಇದ್ದು, ಇದರಲ್ಲಿ ವಾರ್ಡ್ ರಸ್ತೆಗಳು ೧೧ ಸಾವಿರ ಕಿಲೋ ಮೀಟರ್ ಇದೆ.

ಇನ್ನೂ, ಇದಕ್ಕಾಗಿ ೨೫ ಸಾವಿರ ಕೋಟಿ ಹಣ ಖರ್ಚು ಮಾಡಿದ್ದರೂ ಸಮಸ್ಯೆ ಇಲ್ಲದ ರಸ್ತೆಗಳನ್ನು ಹುಡುಕಬೇಕಾಗಿದೆ ಎಂದರು.

ರಸ್ತೆ ಕಾಮಗಾರಿ ಸೇರಿ ಎಲ್ಲ ರೀತಿಯ ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ಬರೋಬ್ಬರಿ ೨೯ ಸಾವಿರ ಕೋಟಿ ರೂಪಾಯಿ ಖರ್ಚು ಆಗಿದ್ದು,ಇದರಲ್ಲಿ ಸಿಂಹಪಾಲು ಬಿಜೆಪಿ ಪಕ್ಷದವರು ಪಾಲಾಗಿರುವುದು ಸಹ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದು ಸರ್ಕಾರದ ಇಬ್ಬಗೆಯ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಸದನದ ಗಮನ ಸೆಳೆದರು.ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದರೂ ಬೆಂಗಳೂರು ನಗರದ ರಸ್ತೆಗಳು ಗುಂಡಿಗಳಿಂದ ಮುಕ್ತವಾಗದಿರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಎಲ್ಲೆಲ್ಲಿ ಕಳಪೆ ಕಾಮಗಾರಿಗಳು ಕಂಡುಬಂದಿವೆ.

ಸರ್ಕಾರದ ಹಣ ಪೋಲಾಗಿದೆ ಅಂತಹ ಕಡೆಗಳಲ್ಲಿ ತನಿಖೆ ನೆಡಸಿ ಸಂಬಂಧಪಟ್ಟವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಸಭಾನಾಯಕ ಕೋಟಾ ಶ್ರೀನಿವಾಸಪೂಜಾರಿ, ಈ ಬಗ್ಗೆ ಕ್ರಮ ಕೈಗೊಳ್ಳು ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದು ಸದನಕ್ಕೆ ತಿಳಿಸಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button