ಪಶ್ಚಿಮ ಬಂಗಾಳದಲ್ಲಿ ನಿಷೇಧಾಜ್ಞೆ ಜಾರಿ, ಜೂ.13ರವೆರೆಗೆ ಅಂತರ್ಜಾಲ ಸೇವೆ ಸ್ಥಗಿತ
West Bengal: Internet services suspended

ಪ್ರವಾದಿ ಮೊಹಮ್ಮದ್್ಯ ವಿರುದ್ಧದ ವಿವಾದಾತ್ಮಕ ಹೇಳಿಕೆ ಖಂಡಿಸಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಶುಕ್ರವಾರ ಹಿಂಸಾಚಾರದಿಂದ ಕದಡಿದ್ದ ವಾತಾವರಣ ಶನಿವಾರ ತಹಬದಿಗೆ ಬಂದಿದೆ. ಸ್ಥಳದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.ಜೂನ್ 10-15 ರವರೆಗೆ ಉಲುಬೇರಿಯಾ, ಪಂಚ್ಲ ಮತ್ತು ಜಗತ್ಬಲ್ಲಾವ್ಪುರ ಪ್ರದೇಶಗಳು, ರೈಲ್ವೆ ನಿಲ್ದಾಣಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನ ಒಂದೆಡೆ ಗುಂಪು ಸೇರುವುದು, ಮಾರಕ ಆಯುಧಗಳನ್ನು ಕೊಂಡೊಯ್ಯುವುದು, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಜಿಲ್ಲೆಯಾದ್ಯಂತ ಜೂನ್ 13 ರವೆರೆಗೆ ಅಂತರ್ಜಾಲ ಸೇವೆಯನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದರು.
“ಹೌರಾ ಜಿಲ್ಲೆಯಲ್ಲಿನ ಪರಿಸ್ಥಿತಿ ಶಾಂತಿಯುತವಾಗಿದೆ. ಶುಕ್ರವಾರ ರಾತ್ರಿಯಿಂದ ಯಾವುದೇ ಪ್ರತಿಭಟನೆ, ಹಿಂಸಾಚಾರದಂತಹ ಘಟನೆಗಳ ವರದಿಯಾಗಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಪಿಟಿಐಗೆ ತಿಳಿಸಿದರು.ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳಕಾರಿಯಾಗಿ ಹೇಳಿಕೆ ನೀಡಿದ್ಧ ಅಮಾನತುಗೊಂಡ ಬಿಜೆಪಿಯ ವಕ್ತಾರೆ ನೂಪುರ್ ಶರ್ಮಾ ಮತ್ತು ಉಚ್ಚಾಟಿತ ಮುಖಂಡ ನವೀನ್ ಕುಮಾರ್ ಜಿಂದಾಲ್ ವಿರುದ್ಧ ಹೌರಾ ಜಿಲ್ಲೆಯ ಹಲವು ಭಾಗಗಳಲ್ಲಿ ಶುಕ್ರವಾರ ಪ್ರತಿಭಟನೆ ಭುಗಿಲೆದ್ದವು.
ಹೌರಾ ಜಿಲ್ಲೆಯಲ್ಲಿ ಉದ್ರಿಕ್ತರು ಕಲ್ಲು ತೂರಾಟ ನಡೆಸಿದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು. ಪ್ರತಿಭಟನೆ ಹಿಂಸಾಚಾರ ಪಡೆದು ಪೊಲೀಸ್ ಆಸ್ತಿಗಳನ್ನು ಹಾನಿಗೊಳಿಸಲಾಯಿತು. ಪೊಲೀಸರ ಜೊತೆ ವಾಗ್ವಾದ ನಡೆಸಲಾಯಿತು.