ಅಪರಾಧ

ಪಿಎಸ್‌ಐ ಪರೀಕ್ಷೆ ಅಕ್ರಮ : ದೈಹಿಕ ಶಿಕ್ಷಕ ಅರೆಸ್ಟ್

ಕಲಬುರಗಿ : ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯ ದೈಹಿಕ ಶಿಕ್ಷಕ ಶಂಕ್ರಪ್ಪ ಬಸಪ್ಪ ಹನುಮಗೊಂಡ (32) ಎಂದು ಗುರುತಿಸಲಾಗಿದೆ.ಪ್ರಕರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ನಿಕಟವರ್ತಿಯಾಗಿದ್ದ ಶಂಕ್ರಪ್ಪ ಅಭ್ಯರ್ಥಿಗಳನ್ನು ಹುಡುಕಿ ಹಣದ ವ್ಯವಹಾರ ಮಾಡುತ್ತಿದ್ದನು.

ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಶ್ರೀ ಶೈಲ ಬಿರಾದಾರ ಎಂಬಾತನಿಗೆ ಉತ್ತರಗಳನ್ನು ಬ್ಲೂಟೂತ್ ಮೂಲಕ ನೀಡಿದ ಆರೋಪದ ಮೇರೆಗೆ ಡಿವೈಎಸ್ಪಿ ಶಂಕರಗೌಟ ಪಾಟೀಲ್ ಮತ್ತಿತರರ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ.

ಸಿಐಡಿ ಪೊಲೀಸರು ಹಲವರನ್ನು ಇದುವರೆಗೆ ಬಂಧಿಸಿ ಜೈಲಿಗಟ್ಟಿದ್ದಾರೆ, ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಒಬ್ಬೊಬ್ಬರನ್ನಾಗಿ ಬಂಧಿಸುತ್ತಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button