ರಾಜ್ಯ

ಪಿಕ್ನಿಕ್ ತಾಣವಾಗಿ ಮಾರ್ಪಟ್ಟ ರಾಷ್ಟ್ರಪತಿ ಭವನ, ಅಡುಗೆ ಕ್ಯಾರಂ ಆಟದ ಮೂಲಕ ಪ್ರತಿಭಟನಾಕಾರರ ಮೋಜು ಮಸ್ತಿ

ಭಾರತದ ನೆರೆಯ ರಾಷ್ಟ್ರ ಶ್ರೀಲಂಕಾ ಬಿಕ್ಕಟ್ಟಿನಲ್ಲಿದೆ. ಇಲ್ಲಿನ ಜನರು ಅಧ್ಯಕ್ಷ ಗೋಟಬಯ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

ರಾಷ್ಟ್ರಪತಿ ಭವನ ಮತ್ತು ಪ್ರಧಾನಿ ನಿವಾಸದಲ್ಲಿ ಜನರು ಬೀಡು ಬಿಟ್ಟಿದ್ದಾರೆ. ದೇಶದ ಅತ್ಯಂತ ಸುರಕ್ಷಿತ ಸ್ಥಳಗಳು ಇದೀಗ ಪಿಕ್ನಿಕ್ ತಾಣಗಳಾಗಿ ಮಾರ್ಪಟ್ಟಿವೆ.

ಜನರು ಇಲ್ಲಿ ಅಡುಗೆ ಮಾಡಿಕೊಂಡು, ವಿವಿಧ ಆಟಗಳನ್ನು ಆಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.ಅಧ್ಯಕ್ಷ ಗೋಟಬಯ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಅಧ್ಯಕ್ಷ ಮತ್ತು ಪ್ರಧಾನಿ ನಿವಾಸಗಳಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಸ್ಪಷ್ಟಪಡಿಸಿದ್ದಾರೆ.

ಶ್ರೀಲಂಕಾದ ಪ್ರಧಾನಿ ನಿವಾಸವಾಗಿರುವ ಟೆಂಪಲ್ ಟ್ರೀ ಒಳಗೆ, ಜನರು ಕೇರಂ ಬೋರ್ಡ್‌ಗಳನ್ನು ಆಡುವುದು, ಸೋಫಾಗಳ ಮೇಲೆ ವಿಶ್ರಾಂತಿ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ.ಶ್ರೀಲಂಕಾದಲ್ಲಿ ಏನಾಗುತ್ತಿದೆ? :ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿರುವ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ನುಗ್ಗಿದ್ದಾರೆ.

ಇದರಿಂದಾಗಿ ರಾಜಪಕ್ಸೆ ತಮ್ಮ ನಿವಾಸ ಬಿಟ್ಟು ತೆರಳುವುದು ಅನಿವಾರ್ಯವಾಗಿತ್ತು. ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.

ಪ್ರಧಾನಿ ರನಿಲ್ ವಿಕ್ರಮಸಿಂಗ್ ಅವರ ಖಾಸಗಿ ನಿವಾಸಕ್ಕೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಸಾರ್ವಜನಿಕ ಪ್ರತಿಭಟನೆಯ ನಡುವೆ ಅಧ್ಯಕ್ಷ ರಾಜಪಕ್ಸೆ ಜುಲೈ 13 ರಂದು ರಾಜೀನಾಮೆ ನೀಡಲಿದ್ದಾರೆ.

ಪ್ರಧಾನಿ ರಾನಿಲ್ ವಿಕ್ರಮಸಿಂಗ್ ಭಾನುವಾರ ರಾಜೀನಾಮೆ ನೀಡಿದ್ದಾರೆ. ಶನಿವಾರ ರಾಷ್ಟ್ರಪತಿ ಭವನದ ಮಲಗುವ ಕೋಣೆ, ಈಜುಕೊಳದಲ್ಲಿ ಪ್ರತಿಭಟನಾಕಾರರು ಸುತ್ತಾಡುತ್ತಿರುವ ದೃಶ್ಯ ಕಂಡು ಬಂತು.

1948 ರಲ್ಲಿ ಸ್ವಾತಂತ್ರ್ಯ ಪಡೆದ ನಂತರ ದೇಶವು ಎದುರಿಸುತ್ತಿರುವ ಅಭೂತಪೂರ್ವ ಆರ್ಥಿಕ ಬಿಕ್ಕಟ್ಟು ಇದಾಗಿದೆ.

ಈ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾರ್ವಜನಿಕ ಆಕ್ರೋಶದಿಂದಾಗಿ 73 ವರ್ಷದ ರಾಜಪಕ್ಸೆ ಅವರು ಭೂಗತರಾಗಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button