ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾರಿಹಾಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಈ ಅಪಘಾತ ನಡೆದಿದೆ

ಹುಬ್ಬಳ್ಳಿ, ಮೇ 24; ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾರಿಹಾಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಈ ಅಪಘಾತ ನಡೆದಿದೆ. ಸ್ಥಳದಲ್ಲಿಯೇ 6 ಮಂದಿ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾತ್ರಿ 12.45ರ ಸುಮಾರಿಗೆ ಈ ಅಪಘಾತ ನಡೆದಿದೆ. ಕೊಲ್ಲಾಪುರದಿಂದ ಅಕ್ಕಿ ತುಂಬಿಕೊಂಡು ಬರುತ್ತಿದ್ದ ಲಾರಿ ಮತ್ತು ನ್ಯಾಷನಲ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಲಾರಿ ಡ್ರೈವರ್, ಕ್ಲೀನರ್, ಬಸ್ ಚಾಲಕ ಮೃತಪಟ್ಟಿದ್ದಾರೆ.
ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್‌ಗೆ ಡಿಕ್ಕಿ ಹೊಡೆದ ಲಾರಿ ಪಕ್ಕದಲ್ಲಿ ಬರುತ್ತಿದ್ದ ಟ್ರಾಕ್ಟರ್ ಮೇಲೆ ವಾಲಿದೆ. ಟ್ರಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಳೆದ ಶನಿವಾರ ಹುಬ್ಬಳ್ಳಿಯಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು 7 ಜನರು ಮೃತಪಟ್ಟ ಅಪಘಾತ ನಡೆದಿತ್ತು.