ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ; ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಬರ್ಬರ ಹತ್ಯೆ

ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ
ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (32) ಕೊಲೆಯಾದ ದುರ್ದೈವಿ. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ
ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ, ಕೇರಳದ ರಿಜಿಸ್ಟರ್ ಆಗಿರೋ ಬೈಕ್ ಮೇಲೆ ಬಂದ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ.