
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ತನ್ನ ಮನೆಯ ಸಮೀಪವಿರುವ ಅವರ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಸಬ್ ಇನ್ಸ್ ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಅವರ ಶವ ಅವರ ಮನೆ ಸಮೀಪದ ಗದ್ದೆಯಲ್ಲಿ ಪತ್ತೆಯಾಗಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಪಾಂಪೋರ್ ಪ್ರದೇಶದ ಸಂಬೂರಾ ನಿವಾಸಿ ಮಿರ್ ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿಯಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐಆರ್‍ಪಿ 23 ಬಿಎನ್‍ನಲ್ಲಿ ಪೋಸ್ಟ್ ಮಾಡಲಾದ ಸಂಬೂರಾ ಸಿ(ಎಂ) ನ ಫಾರೂಕ್ ಅಹ್ ಮಿರ್ ನಿನ್ನೆ ಸಂಜೆ ತಮ್ಮ ಗದ್ದೆಯಲ್ಲಿ ಕೆಲಸಕ್ಕಾಗಿ ಮನೆಯಿಂದ ಹೊಗಿದ್ದಾಗಿ ಕುಟುಂಬಸ್ಥರು ಹೇಳಿದ್ದಾರೆ. ಅವರನ್ನು ಭಯೋತ್ಪಾದಕರು ಪಿಸ್ತೂಲ್ ಬಳಸಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ವಲಯ ಪೋಲೀಸರು ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.