
ಬಂಕ್‍ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಉದಯ್ ಮತ್ತು ಕಿರಣ್ ಬಂಧಿತ ಆರೋಪಿಗಳು. ಜೂನ್ 2ರಂದು ರಾತ್ರಿ 9.30ರ ಸಮಯದಲ್ಲಿ ಬ್ಯಾಟರಾಯನಪುರದ ಪೆಟ್ರೊಲ್ ಬಂಕ್‍ಗೆ ಬೈಕ್ ನಲ್ಲಿ ಬಂದಿದ್ದ ಮೂವರು ತಮ್ಮ ವಾಹನಕ್ಕೆ ಫುಲ್‍ಟ್ಯಾಂಕ್ ಪೆಟ್ರೊಲ್ ಹಾಕಿಸಿಕೊಂಡಿದ್ದರು. ನಂತರ ಹಣ ಕೇಳಿದ ಕ್ಯಾಶಿಯರ್ ಮತ್ತು ಸಿಬ್ಬಂದಿ ಮೇಲೆ ಆವಾಜ್ ಹಾಕಿ, ಮಚ್ಚು ಬೀಸಿ ಬೆದರಿಸಿ ಹಣ ನೀಡದೆ ಪರಾರಿಯಾಗಿದ್ದರು.
ಈ ಸಂಬಂಧ ಬಂಕ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಶೋಧ ನಡೆಸುತ್ತಿದ್ದಾರೆ.
ಬಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿ ಬೆದರಿಸಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ಆರೋಪಿಗಳು ಅದೇ ರಾತ್ರಿ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಹಣ ಆಭರನ ದರೋಡೆ ಮಾಡಿದ್ದರು ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ.