
ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ ಅದಾಲತ್ ಕಾರ್ಯಕ್ರಮದಲ್ಲಿ ತೆರಳಬೇಕಿತ್ತು.
ಬೆಳಗ್ಗೆ 7 ಗಂಟೆಗೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಖಾಸಗಿ ಕಂಪನಿಗೆ ಸೇರಿದ ಹೆಲಿಕಾಪ್ಟರ್‍ನ್ನು ಬುಕ್ ಮಾಡಲಾಯಿತು. ನಿಗದಿತ ಸಮಯಕ್ಕೆ ಸರಿಯಾಗಿ ಇಬ್ಬರು ಸಚಿವರು ಎಚ್‍ಎಎಲ್‍ಗೆ ಬಂದರು. ಇನ್ನೇನು ಹೆಲಿಕಾಪ್ಟರ್ ಹೊರಡಬೇಕು ಎನ್ನುವಷ್ಟರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ತಕ್ಷಣವೇ ಪೈಲೆಟ್‍ಎಚ್ಚೆತ್ತುಕೊಂಡು ಹೆಲಿಕಾಪ್ಟರ್‍ನ್ನು ಹಾರಿಸಲಿಲ್ಲ.
ತಾಂತ್ರಿಕ ದೋಷ ಇರುವುದರಿಂದ ಹಾರಾಟ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಬೇರೆ ಹೆಲಿಕಾಪ್ಟರ್ ನೋಡಿಕೊಳ್ಳುವಂತೆ ಪೈಲೆಟ್ ಸಲಹೆ ಮಾಡಿದ. ಕೊನೆಗೆ ಇಬ್ಬರು ಸಚಿವರು ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಿದರು.