ರಾಜ್ಯ

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

ಹೊಸ ವರ್ಷ ಸಂಭ್ರಮಕ್ಕೆ ಇನ್ನೆರಡು ಮೂರು ದಿನಗಳಷ್ಟೇ ಬಾಕಿ ಇದ್ದು ಈ ನಡುವೆ ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ.ಡಿಸೆಂಬರ್ 31 ಹಾಗೂ ಜನವರಿ 1 ರಂದು ಅರಣ್ಯ ಇಲಾಖೆಯ ಡಾರ್ಮೆಟರಿಗಳು, ಕಾಟೇಜ್ ಗೆಸ್ಟ್ ಹೌಸ್‌ಗಳಲ್ಲಿ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.

ಆನ್‌ ಲೈನ್ ಬುಕಿಂಗ್ ಕೂಡಾ ಬ್ಲಾಕ್ ಮಾಡಲಾಗಿದೆ.ಡಿಸೆಂಬರ್ 31 ಹಾಗೂ ಜನವರಿ 1 ಕ್ಕೆ ಬಂಡೀಪುರದಲ್ಲಿ ಮೋಜು-ಮಸ್ತಿಗಷ್ಟೇ ಬ್ರೇಕ್ ಹಾಕಲಾಗಿದ್ದು, ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ಸಫಾರಿ ಇರಲಿದೆ.

ಆದರೆ ವಾಸ್ತವ್ಯ ಹೂಡುವಂತಿಲ್ಲ ಎಂದು ಬಂಡೀಪುರ CF ಡಾ.ರಮೇಶ್ ಕುಮಾರ್ ಹೇಳಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button