
ರಾಜಧಾನಿಯಲ್ಲಿ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಕ್ರೀದ್ ಹಬ್ಬ ಆಚರಣೆ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮೈಕ್ ಮೂಲಕ ಸಾರ್ವಜನಿ ಸ್ಥಳಗಳಲ್ಲಿ ಅನೌನ್ಸ್ ಮಾಡುವ ಮೂಲಕ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ಬಕ್ರೀದ್ ಹಬ್ಬಕ್ಕೆ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ, ಬಕ್ರೀದ್ ಹಬ್ಬದ ದಿನ ಕೋವಿಡ್ -19 ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಬಾನಿ (ಪ್ರಾಣಿ ಬಲಿ) ನೀಡಬೇಕು.
ಸಾರ್ವಜನಿಕ ಪ್ರದೇಶ,ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನ ಪ್ರಾಣಿ ಬಲಿ ನಿಷೇಧ ಹೇರಲಾಗಿದೆ. ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಂಸ್ಥೆಯ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಮುಸ್ಲಿಂ ಬಾಂದವರು ಖುರ್ಬಾನಿ ಮಾಡಬೇಕು. ಪೊಲೀಸ್ ಇಲಾಖೆ, ಪಶು ಪಾಲನಾ, ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ಪಾಲಿಸುವುದು ಕಡ್ಡಾಯ ಎಂದು ಆದೇಶದಲ್ಲಿ ತಿಳಿಸಿದೆ.