
ಬಸ್ ನಿಲ್ದಾಣದ ಮೇಲೆ ಗುಂಬಾಜ್ ಇರುವುದನ್ನ ಗಮನಿಸಿದ್ದೇನೆ. ಗುಂಬಾಜ್ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ತೆರವುಗೊಳಿಸದಿದ್ದರೇ ನಾನೇ ಒಡೆದು ಹಾಕುತ್ತೇನೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿರುವ ಭಾಷಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನ.13ರಂದು ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದೆ. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಗಮನಿಸಿದ್ದೇನೆ.
ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ.
ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೇ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಭಾಷಣದಲ್ಲಿ ಹೇಳಿದ್ದಾರೆ.