Uncategorized

ಬಿಎಂಟಿಸಿ ಚಾಲಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ

ಬೆಂಗಳೂರು: ಬಿಎಂಟಿಸಿ ಚಾಲಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ರಾಜರಾಜೇಶ್ವರಿ ನಗರ ಬಸ್ ಡಿಪೋ 21 ರ ಬಿಎಂಟಿಸಿ ಬಸ್​ ಚಾಲಕ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ
ಇನ್ನು ಈ ಹಿಂದಿನಿಂದಲೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅನೇಕ ಬಿಎಂಟಿಸಿ ನೌಕರರು ಸಾವಿಗೆ ಶರಣಾಗಿದ್ದರು. ಅದರಂತೆ ಹೊಳೆಬಸಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ತಿಂಗಳ ಕಳೆದ 21 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button