ರಾಜಕೀಯ

ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ದೇಶದ ಮೂಲ ತತ್ವಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ದಾಳಿ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ ನೇರ ವಾಗ್ದಾಳಿ ನಡೆಸಿದ್ದಾರೆ.ದ್ವೇಷದಿಂದ ಸಮಾಜ ಒಡೆಯುವ ಕೆಲಸದ ಜೊತೆಗೆ ಬೆಲೆ ಏರಿಕೆ, ನಿರುದ್ಯೋಗದಿಂದ ಜನ ತತ್ತರಿಸಿದ್ದರೂ ಸರಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ದೂರಿದ್ದಾರೆ.

ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದೇಶದೆಲ್ಲೆಡೆ ದ್ವೇಷದ ಕೂಪ ಸೃಷ್ಟಿ ಮಾಡಲಾಗುತ್ತಿದೆ. ಹಣದುಬ್ಬರ, ನಿರುದ್ಯೋಗದಿಂದ ಜನರು ತೊಂದರೆಯಲ್ಲಿದ್ದಾರೆ ಆದರೆ ಸರಕಾರ ಕಾಳಜಿ ವಹಿಸುತ್ತಿಲ್ಲ” ಎಂದು ಗುಡಿಗಿದ್ದಾರೆ.

ಭಾರತ್ ಜೋಡೊ ಯಾತ್ರೆಗೆ ಬೆಂಬಲ:ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ದೇಶದ ಜನರಿಗೆ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.ಯುವಕರು, ಮಹಿಳೆಯರು ಮತ್ತು ಬುದ್ಧಿಜೀವಿಗಳನ್ನು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರಾರಂಭವಾಗಿದೆ.

ಇದು ನಮ್ಮ ಪ್ರತಿಸ್ಪರ್ಧಿಗಳಿಗೆ ಆತಂಕ ಉಂಟು ಮಾಡಿದೆ. ಈ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ನಾವು ಜನರಿಗೆ ಮನವಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.ಮಾಜಿ ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಸಂಸದ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಪಕ್ಷದ ೧೩೮ ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲು ಎಐಸಿಸಿ ಕಚೇರಿಯಲ್ಲಿ ಉಪಸ್ಥಿತರಿದ್ದರು.

೧೮೮೫ರ ಡಿಸೆಂಬರ್ ೨೮ ರಂದು ಬಾಂಬೆಯಲ್ಲಿ (ಮುಂಬೈ) ದಾಸ್ ತೇಜ್ಪಾಲ್ ಸಂಸ್ಕೃತ ಕಾಲೇಜಿನಲ್ಲಿ ೭೨ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸ್ಥಾಪಿಸಲಾಯಿತು.ಇದರ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಎಒ ಹ್ಯೂಮ್ ಮತ್ತು ವೂಮೇಶ್ ಚಂದ್ರ ಬ್ಯಾನರ್ಜಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು.

ಪ್ರತಿ ವರ್ಷ ಡಿಸೆಂಬರ್ ೨೮ ರಂದು ಪಕ್ಷ ತನ್ನ ಸಂಸ್ಥಾಪನಾ ದಿನವನ್ನು ಆಚರಿಸುತ್ತದೆ.ಕಾಂಗ್ರೆಸ್ ಪಕ್ಷಕ್ಕೆ ೨೪ ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರು ಸಿಕ್ಕಿದ್ದಾರೆ. ೧೯೯೮ ರಲ್ಲಿ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.

೨೦೧೭ ರಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು ಆದರೆ ಚುನಾವಣೆಯಲ್ಲಿ ಸೋಲಿನ ನಂತರ ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರುದೇಶದ ಪ್ರಗತಿಗೆ ಕಾಂಗ್ರೆಸ್ ಕಾರಣ:ದೇಶದಲ್ಲಿ ದಲಿತರ, ಬಡವರೂ ಸೇರಿದಂತೆ ಎಲ್ಲರನ್ನೂ ಜೊತೆಯಾಗಿ ಕೊಂಡೊಯ್ಯವ ತತ್ವವನ್ನು ಪಕ್ಷ ಅನುಸರಿಸುತ್ತಿದೆ ಇದೇ ಕಾರಣಕ್ಕೆ ದೇಶ ಅಭಿವೃದ್ದಿಯಾಗಲು ಕಾಂಗ್ರೆಸ್ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಹೇಳಿದ್ದಾರೆ..

ದೇಶ ಪ್ರಗತಿಯಾಗಲು ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ.ದಲಿತರ, ಬಡವರ ಸಂಕೋಲೆಯನ್ನು ಮುರಿಯುವ ಧೈರ್ಯವನ್ನು ಕಾಂಗ್ರೆಸ್ ತೆಗೆದುಕೊಂಡಿದೆ. ಪ್ರಜಾಪ್ರಭುತ್ವವನ್ನು ಗಟ್ಟಿಯಾಗಿಡಲು ಪಂಡಿತ್ ಜವಾಹರಲಾಲ್ ನೆಹರು ಅವರು ತಮ್ಮ ಸಂಪುಟದಲ್ಲಿ ಐವರು ಕಾಂಗ್ರೆಸ್ಸೇತರ ಸಚಿವರನ್ನು ನೇಮಿಸಿದ್ದರು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಎಲ್ಲರನ್ನು ಜೊತೆಯಾಗಿಸಿಕೊಂಡು ಮುನ್ನೆಡೆಯು ಶಕ್ತಿ ಹೊಂದಿದೆ ಎಂದಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button