
ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರ ಅಣ್ಣನ ಮಗನ ಶವ ಭದ್ರ ಮೇಲ್ದಂಡೆ ಕಾಲುವೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ನದಿಯಲ್ಲಿ ಪತ್ತೆಯಾಗಿದೆ.
ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಚಂದ್ರಶೇಖರ್ (24) ಪತ್ತೆಯಾಗಿದೆ.
ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಚಂದ್ರಶೇಖರ್ ಶವ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸೀಟ್ ಬೆಲ್ಟ್ ಧರಿಸಿದ್ದರೂ ಕಾರಿನ ಹಿಂಬದಿ ಸೀಟಿನಲ್ಲಿ ಶವ ಇರುವುದು ಅನುಮಾನಕ್ಕೆ ಕಾರಣವಾಗಿದೆ.
ಸ್ಥಳೀಯ ನಿವಾಸಿಗಳು ಕಾಲುವೆಯಲ್ಲಿ ಕಾರು ಬಿದ್ದಿದೆ ಎಂದು ನೀಡಿದ ಮಾಹಿತಿ ಆಧಾರದ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಿದ್ದಾರೆ.ಕಾರಿನ ಏರ್ ಬ್ಯಾಗ್ ತೆರೆದಿದ್ದು, ಹಿಂಭಾಗದಲ್ಲಿ ಶವ ಪತ್ತೆಯಾಗಿದೆ.
ಮುಂಭಾಗದ ಗಾಜು ಒಡೆದಿದ್ದರೆ ಹಿಂಭಾಗದಲ್ಲಿ ಕಾರು ನಜ್ಜುಗುಜ್ಜಾಗಿದೆ. ಹೀಗಾಗಿ ಇದು ಅಪಘಾತವೇ ಅಥವಾ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದ್ಯಾ ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕಿದೆ.
ರೇಣುಕಾಚಾರ್ಯ, ಕೆಲ ದಿನಗಳಿಂದ ನನ್ನ ತಮ್ಮನ ಮಗ ಚಂದ್ರಶೇಖರ್‌ನನ್ನು ಹಿಂಬಾಲಿಸುತ್ತಿದ್ದರು. ಅವರೇ ಕಿಡ್ನ್ಯಾಪ್ ಮಾಡಿದ್ದಾರೆ.
ಆದರೆ ಯಾವ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಅವರು ಉದ್ದೇಶ ಪೂರ್ವಕವಾಗಿಯೇ ಈ ರೀತಿ ಕೆಲಸ ಮಾಡಿದ್ದಾರೆ ಎಂದು ಸ್ಫೋಟಕ ಮಾಹಿತಿ ನೀಡಿದ್ದರು.