
ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು 6.30 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಕಿಂಗ್ಪಿನ್ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ.ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಡ್ರಗ್ಸ್ ಜಪ್ತಿ ಮಾಡಲಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಡ್ರಗ್ಸ್ ಪೂರೈಸಲು ಆರೋಪಿಗಳು ಯತ್ನಿಸುತ್ತಿದ್ದರುಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
350 ಎಕ್ಸ್ಟಸಿ ಮಾತ್ರೆಗಳು, 2.5 ಕೆ.ಜಿ ಎಂಡಿಎಂಎ, 440 ಗ್ರಾಂ ಚರಸ್, 7 ಕೆ.ಜಿ ಗಾಂಜಾವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದೇಶಿ ಪ್ರಜೆ ಸೇರಿ 6 ಡ್ರಗ್ ಪೆಡ್ಲರ್ಗಳನ್ನು ವಶಕ್ಕೆ ಪಡೆಯಲಾಗಿದೆ, ಗೋವಾದಿಂದ ಬೆಂಗಳೂರಿಗೆ ಡ್ರಗ್ಸ್, ಗಾಂಜಾ ಪೂರೈಸುತ್ತಿದ್ದ ಮಾಹಿತಿ ಲಭ್ಯವಾಗಿರುವುದಾಗಿ ತಿಳಿಸಿದ್ದಾರೆ.