ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ತುರ್ತು ಭೂಸ್ಪರ್ಶ

ಮುಂಬೈ: ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದ ನಡು ಆಗಸದಲ್ಲಿ ವಿಮಾನ ಸ್ಥಗಿತಗೊಂಡು ಕೆಲ ನಿಮಿಷದಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಗೊಂಡಿತು.ಗುರುವಾರ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಬೆಂಗಳೂರಿಗೆ ಹೊರಟಿದ್ದ ವಿಮಾನ ಇದಾಗಿದ್ದು, ನಂತರ ಆ ವಿಮಾನದ ಪ್ರಯಾಣಿಕರನ್ನು ಬೇರೆ ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.ಮುಂಬೈ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೇವಲ 27 ನಿಮಿಷಗಳಲ್ಲಿ ಏರ್ ಇಂಡಿಯಾದ A320neo ವಿಮಾನವು ನಿಲ್ದಾಣಕ್ಕೆ ಮರಳಿ ತುರ್ತು ಭೂಸ್ಪರ್ಶವಾಯಿತು. ಈ ಘಟನೆಯ ಕುರಿತು ವಿಮಾನಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (Aviation regulator Directorate General of Civil Aviation) ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.