Educationಅಪರಾಧಬೆಂಗಳೂರುರಾಜ್ಯ

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ: ಐವರ ಬಂಧನ

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್​​ ಕಾರ್ಡ್​​ ಮಾರಾಟ ದಂಧೆಯನ್ನ ಸಿಸಿಬಿ ಪೊಲೀಸರು ಭೇದಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೇಶದ 29 ವಿಶ್ವವಿದ್ಯಾಲಯಗಳ ಅಂಕಪಟ್ಟಿ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ . ಬಂಧಿತರಿಂದ 1500 ಕ್ಕೂ ಹೆಚ್ಚು ನಕಲಿ ಮಾರ್ಕ್ಸ್ ಕಾರ್ಡ್ , 80 ನಕಲಿ ಸೀಲ್ , 30 ಹಾಲೋಗ್ರಾಂ ಸ್ಟಿಕ್ಕರ್, 8 ಮೊಬೈಲ್​ನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ನಲ್ಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದು, ಪಿ‌ಯು ಬೋರ್ಡ್‌ , ಯುಪಿಯ ಸಿ . ವಿ . ರಾಮನ್ ವಿವಿ , ದೆಹಲಿಯ ಸೆಕೆಂಡರಿ ಬೋರ್ಡ್ , ಮೇಘಾಲಯದ ವಿಲಿಯಂ ಕ್ಯಾರಿ ಯೂನಿವರ್ಸಿಟಿ ಸೇರಿದಂತೆ 25 ಕ್ಕೂ ಹೆಚ್ಚು ವಿವಿಗಳ ಅಂಕಪಟ್ಟಿ ನಕಲು ಮಾಡಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button